ರಾಷ್ಟ್ರೀಯ

ನಕ್ಸಲರಿಂದ ಬಾಂಬ್ ಸ್ಫೋಟ: ಸಿಆರ್ ಪಿಎಫ್ ಯೋಧ ಸಾವು

Pinterest LinkedIn Tumblr

naxalsbರಾಯಪುರ: ಚತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸಿದ್ದು, ಘಟನೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮರಾಗಿದ್ದು, ಅರೆಸೇನಾಪಡೆಯ ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಚಿಂತಲ್ ನರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಓರ್ವ ಸಬ್ ಇನ್ಸ್ ಪೆಕ್ಟರ್ ಮೃತಪಟ್ಟಿದ್ದಾರೆ ಮತ್ತು ಓರ್ವ ಮುಖ್ಯ ಪೊಲೀಸ್ ಪೇದೆ ಗಾಯಗೊಂಡಿದ್ದಾರೆ. ಇನ್ನು ಮರೈಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸಿಆರ್ ಪಿಎಫ್ ಅಧಿಕಾರಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ನಕ್ಸಲ್ ಪೀಡಿತ ಬುರ್ಕಪಾಲ್ ಪೊಲೀಸ್ ಕ್ಯಾಂಪ್ ಮತ್ತು ಚಿಂತಲ್ ನರ್ ಪ್ರದೇಶದಲ್ಲಿ ಸಿಆರ್ ಪಿಎಫ್ ನ 74ನೇ ಬಟಾಲಿಯನ್ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಐಇಡಿ ಬಾಂಬ್ ಸ್ಫೋಟಿಸಲಾಗಿದೆ. ಸ್ಫೋಟದಲ್ಲಿ ಸಬ್ ಇನ್ಸ್ ಪೆಕ್ಟರ್ ಬಿಎಸ್ ಬಿಸ್ಟ್ ಮೃತಪಟ್ಟರೆ, ಮುಖ್ಯ ಪೇದೆ ಸುಧಾಕರ್ ಅವರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

Comments are closed.