ರಾಷ್ಟ್ರೀಯ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಇನ್ನು ಮುಂದೆ ಆಧಾರ್ ಸಂಖ್ಯೆ ಕಡ್ಡಾಯ

Pinterest LinkedIn Tumblr

adhar

ಬೆಂಗಳೂರು: ವೃತ್ತಿಪರ ಪದವಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳು ಮುಂದಿನ ವರ್ಷ ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ನೀಡಬೇಕೆಂಬ ಆದೇಶ ಹೊರಡಿಸಲಾಗಿದೆ.

ದೇಶಾದ್ಯಂತ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿಗಳಲ್ಲಿ ಅನೇಕ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳು ಸಂಯುಕ್ತ ಪ್ರವೇಶ ಮುಖ್ಯ ಪರೀಕ್ಷೆ(ಜೆಇಇ)ಗೆ ಮುಂದಿನ ವರ್ಷ ಹಾಜರಾಗುವವರು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಒದಗಿಸಬೇಕೆಂದು ಅಧಿಸೂಚನೆ ಹೊರಡಿಸಿದೆ. ರಾಜ್ಯಾದ್ಯಂತ ಇರುವ ಪದವಿ ಪೂರ್ವ ಕಾಲೇಜುಗಳು ಈ ನಿಯಮವನ್ನು ಈಗಾಗಲೇ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಿಳಿಸಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನಿಖರ ಆಧಾರ್ ಸಂಖ್ಯೆ ಮತ್ತು ಇತರ ವಿವರಗಳನ್ನು ತಯಾರು ಮಾಡಿಟ್ಟುಕೊಳ್ಳುವಂತೆ ಮಾಹಿತಿ ನೀಡಲಾಗಿದೆ. ಅದು ಹೊರಡಿಸಿರುವ ಅಧಿಸೂಚನೆಯಲ್ಲಿ, ” ಜೆಇಇ ಮುಖ್ಯ ಪರೀಕ್ಷೆ-2017 ರ ಪ್ರವೇಶ ಅಧಿಸೂಚನೆ ಪ್ರಕಾರ, ಪ್ರತಿ ಅರ್ಜಿದಾರನು ನಿಖರವಾದ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅಭ್ಯರ್ಥಿ ನೀಡಿರುವ ಮಾಹಿತಿ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರದ ದಾಖಲೆಗಳಿಗೆ ಮತ್ತು ಶಾಲೆಯಲ್ಲಿರುವ ವಿದ್ಯಾರ್ಥಿಗಳ ದಾಖಲೆಗಳಿಗೆ ಹೊಂದಿಕೆಯಾಗಬೇಕು. ಒಂದು ವೇಳೆ ಹೊಂದಾಣಿಕೆಯಾಗದಿದ್ದರೆ ಕೂಡಲೇ ಆಧಾರ್ ದಾಖಲೆಗಳನ್ನು ಅಥವಾ ಶಾಲೆಯಲ್ಲಿನ ದಾಖಲೆಗಳನ್ನು ಸರಿಪಡಿಸಿಕೊಳ್ಳಬೇಕು” ಎಂದು ತಿಳಿಸಲಾಗಿದೆ.

ಒಂದು ವೇಳೆ ವಿದ್ಯಾರ್ಥಿಯ ಆಧಾರ್ ಸಂಖ್ಯೆ ಮತ್ತು ಗುರುತಿನ ಪ್ರಾಧಿಕಾರದ ದಾಖಲೆಗಳು ಹೊಂದಿಕೆಯಾಗದಿದ್ದರೆ ಅರ್ಜಿ ತಿರಸ್ಕೃತವಾಗುವ ಸಂದರ್ಭಗಳು ಅಧಿಕವಾಗಿವೆ. ಆಧಾರ್ ವಿವರಗಳನ್ನು ಪರಿಶೀಲಿಸಿ ಮೊದಲೇ ಸರಿಪಡಿಸಿಕೊಳ್ಳಿ ಎಂದು ನಾವು ವಿದ್ಯಾರ್ಥಿಗಳಿವೆ ಹೇಳುತ್ತೇವೆ ಎನ್ನುತ್ತಾರೆ ಬೆಂಗಳೂರಿನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು.

ಈ ಮಧ್ಯೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೂಡ ಸಿಇಟಿ ಪರೀಕ್ಷೆ-2017ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸುವ ಯೋಜನೆಯಲ್ಲಿದೆ. ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ ದಿನಾಂಕ ಪ್ರಕಟವಾಗಲು ನಾವು ಕಾಯುತ್ತಿದ್ದು, ದಿನಾಂಕ ಪ್ರಕಟವಾದ ಕೂಡಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2017ರ ಸಿಇಟಿ ಪರೀಕ್ಷೆಯ ಪ್ರಕ್ರಿಯೆ ಆರಂಭಿಸಲಿದೆ ಎಂದು ಹೇಳಿದರು.

Comments are closed.