ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿರುವ ಕಾರ್ಯಕ್ರಮದ ಭದ್ರತೆಗೆ ನಿಯೋಜನೆಗೊಂಡಿದ್ದ ಸಬ್ಇನ್ಸ್ಪೆಕ್ಟರ್ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದ ಉಪ್ಪಾರಪಲ್ಲಿಯಲ್ಲಿ ಶನಿವಾರ ಘಟನೆ ಸಂಭವಿಸಿದ್ದು, ಕೌಟುಂಬಿಕ ಕಾರಣ ಎಂದು ಪೊಲೀಸರು ಹೇಳಿದ್ದಾರೆ.
ಶ್ರೀಧರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಧಾನಿ ಭಾಗವಹಿಸುತ್ತಿರುವ ಕಾರ್ಯಕ್ರಮದ ಭದ್ರತೆಗಾಗಿ ನಿಯೋಜಿಸಲಾಗಿತ್ತು. ಶ್ರೀಧರ್ ಸರ್ವೀಸ್ ರಿವಲ್ವಾರ್ನಿಂದ ಎದೆಗೆ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಕರ್ತವ್ಯ ನಿರ್ವಹಿಸಿದ್ದ ಅವರು ಶನಿವಾರ ಬೆಳಗಿನಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಡಿಸಿಪಿ ಪಿ.ವಿ. ಪದ್ಮಜ ತಿಳಿಸಿದ್ದಾರೆ.
ಶ್ರೀಧರ್ 2012ರಿಂದ ಚಿಂಟಾಲಮಾನೆಪಲ್ಲಿಯ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ವಾದ್ಯವೃಂದ ತಂಡದ ಕಾರ್ಯಕ್ಕೆ ನಿಯೋಜನೆಗೊಳಿಸಿ ನ. 23ರಂದು ಇಲ್ಲಿಗೆ ಕರೆಸಿಕೊಳ್ಳಲಾಗಿತ್ತು.