ರಾಷ್ಟ್ರೀಯ

ರಾಮ ಮಂದಿರ ನಿರ್ಮಾಣದ ಕುರಿತು ಸುಬ್ರಮಣಿಯನ್ ಸ್ವಾಮಿ-ಅಸಾದುದ್ದೀನ್ ಒವೈಸಿ ಹೇಳಿದ್ದೇನು…?

Pinterest LinkedIn Tumblr

swamy-owaisi

ನವದೆಹಲಿ: ರಾಮ ಮಂದಿರ ನಿರ್ಮಾಣ ಕುರಿತಂತೆ ಸುಪ್ರೀಂಕೋರ್ಟ್ ಯಾವುದೇ ತೀರ್ಪು ನೀಡಿದರೂ ಅದಕ್ಕೆ ನಾವು ಬದ್ಧ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು ಎಐಎಂಐಎಂ ನಾಯಕ ಅಸಾದುದ್ದೀನ್ ಒವೈಸಿ ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆಯಲ್ಲಿನ ವಿವಾದಿತ ರಾಮ ಮಂದಿರ-ಬಾಬ್ರಿ ಮಸೀದಿ ನಿರ್ಮಾಣ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವುದರಿಂದ ಸುಪ್ರೀಂ ತೀರ್ಪನ್ನು ಒಪ್ಪುವುದಾಗಿ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಇಬ್ಬರು ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಬ್ಬರೂ ನಾಯಕರು ಪ್ರಕರಣ ಸಂಬಂಧ ನೇರವಾಗಿ ಯಾವುದೇ ನಂಟು ಹೊಂದಿಲ್ಲವಾದರೂ, ಸ್ವಾಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪರ ಹೋರಾಟ ನಡೆಸುತ್ತಿದ್ದರೆ, ಒವೈಸಿ ಬಾಬ್ರಿ ಮಸೀದಿ ಧ್ವಂಸವನ್ನು ಕಟುವಾಗಿ ವಿರೋಧಿಸುತ್ತಿದ್ದಾರೆ.

Comments are closed.