ರಾಷ್ಟ್ರೀಯ

ಅಮರಿಂದರ್ ಸಿಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದ ಆದಾಯ ತೆರಿಗೆ ಇಲಾಖೆ

Pinterest LinkedIn Tumblr

amarinder-singhನವದೆಹಲಿ: ತೆರಿಗೆ ವಂಚಿಸಿ ವಿದೇಶದಲ್ಲಿ ಆಸ್ತಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ.
ಮೂಲಗಳ ಪ್ರಕಾರ, ಅಮರಿಂದ್ ಸಿಂಗ್ ಹಾಗೂ ಅವರ ಪುತ್ರ ರಣಿಂದರ್ ಸಿಂಗ್ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪಂಜಾಬ್ ನ ಲೂದಿಯಾನ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪಂಜಾಬ್ ಮಾಜಿ ಮುಖ್ಯಮಂತ್ರಿಯ ವಿರುದ್ಧ ಆದಾಯ ತೆರಿಗೆ ಕಾಯ್ದೆಯ ಸೆಕ್ಸೆನ್ 277 ಮತ್ತು ಐಪಿಸಿ ಸೆಕ್ಸೆನ್ 176, 177, 193 ಮತ್ತು 199ರಡಿ ಕೇಸ್ ದಾಖಲಿಸಲಾಗಿದೆ.
ಇನ್ನು ಈ ಬಗ್ಗೆ ಟ್ಟೀಟರ್ ಮೂಲಕ ಪ್ರತಿಕ್ರಿಯಿಸಿರುವ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ ಅವರ ತಂತ್ರ ಇದು ಎಂದು ಆರೋಪಿಸಿದ್ದಾರೆ. ಅಲ್ಲದೆ ಇದು ನಿರೀಕ್ಷಿತ ಎಂದಿರುವ ಅಮರಿಂದರ್ ಸಿಂಗ್, ಜೇಟ್ಲಿ ಅಮೃತಸರ ಚುನಾವಣೆಯಲ್ಲಿ ಹೋರಾಟ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಇತ್ತೀಚಿಗಷ್ಟೇ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಮರಿಂದರ್ ಸಿಂಗ್ ಹಾಗೂ ಅವರ ಕುಟುಂಬದ ಸ್ವಿಸ್ ಬ್ಯಾಂಕ್ ಖಾತೆಗಳನ್ನು ಬಹಿರಂಗಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Comments are closed.