
ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಪ್ರಧಾನಮಂತ್ರಿಯಾಗುವ ಎಲ್ಲಾ ಅರ್ಹತೆಗಳಿವೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಶನಿವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ರಾಜಕೀಯದಲ್ಲಿ ಮಮತಾ ಅವರ ಅರ್ಹತೆ ಬಗ್ಗೆ ಪ್ರಶ್ನಿಸಬಾರದು. ಮಮತಾ ಬ್ಯಾನರ್ಜಿಯವರಿಗೆ ಮುಂದಿನ ಪ್ರಧಾನಮಂತ್ರಿಯಾಗುವ ಎಲ್ಲಾ ಅರ್ಹತೆಗಳಿವೆ ಎಂದು ಹೇಳಿದ್ದಾರೆ.
ನೋಟು ನಿಷೇಧಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಮಮತಾ ಬ್ಯಾನರ್ಜಿಯವರು ತಮ್ಮ ಹೃದಯದಲ್ಲಿ ನಿಷೇಧಕ್ಕೆ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದಾರೆ. ಅವರ ವಿರೋಧ ನೋಟು ನಿಷೇಧ ನಿರ್ಧಾರದ ವಿರುದ್ಧವಲ್ಲ, ನಿಷೇಧ ಹೇರಿರುವ ರೀತಿಯ ವಿರುದ್ಧವಿದೆ ಎಂದು ತಿಳಿಸಿದ್ದಾರೆ.
Comments are closed.