ರಾಷ್ಟ್ರೀಯ

ಜಯಲಲಿತಾ ನಿಧನ ಸುದ್ದಿಯನ್ನು ತಳ್ಳಿಹಾಕಿದ ಅಪೋಲೊ ಆಸ್ಪತ್ರೆ

Pinterest LinkedIn Tumblr

jayala

ಚೆನ್ನೈ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ ಪಾಲಿನ ಪ್ರೀತಿಯ ‘ಅಮ್ಮ’ ಜಯರಾಮ್ ಜಯಲಲಿತಾ ಅವರು ನಿಧನರಾಗಿದ್ದಾರೆ ಎಂಬ ತಮಿಳು ಟೀವಿ ಮಾಧ್ಯಮಗಳ ವರದಿಯನ್ನು ಆಸ್ಪತ್ರೆ ಸ್ಪಷ್ಟವಾಗಿ ತಳ್ಳಿಹಾಕಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಪೋಲೊ ಆಸ್ಪತ್ರೆ, ಜಯಲಲಿತಾ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಅವರಿಗೆ ಕೃತಕ ಉಸಿರಾಟ ಅಳವಡಿಸಲಾಗಿದೆ. ಅವರನ್ನು ಬದುಕಿಸಿಕೊಳ್ಳುವ ಎಲ್ಲಾ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದೆ.

ತಮಿಳು ಹಾಗೂ ಕನ್ನಡದ ಕೆಲವು ಸುದ್ದಿ ವಾಹಿನಿಗಳು ಜಯಲಲಿತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ವಿಧಿವಶರಾಗಿದ್ದಾರೆ ಎಂದು ವರದಿ ಮಾಡಿದ್ದವು. ಆದರೆ ನಿಧನ ವಾರ್ತೆಯನ್ನು ಆಸ್ಪತ್ರೆ ಇದುವರೆಗೂ ಅಧಿಕೃತಗೊಳಿಸಿಲ್ಲ.

ತೀವ್ರ ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿರುವ 68 ವರ್ಷದ ಜಯಲಲಿತಾ ಅವರು ಕಳೆದ ಸೆಪ್ಟೆಂಬರ್ 22ರಂದು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಚ್ಚೀಚಿಗಷ್ಟೇ ತಮಿಳುನಾಡು ಮುಖ್ಯಮಂತ್ರಿಯ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಮಾತನಾಡುತ್ತಿದ್ದಾರೆ ಎಂದು ಅಪೋಲೊ ಆಸ್ಪತ್ರೆಯ ಅಧ್ಯಕ್ಷ ಡಾ. ಪ್ರತಾಪ್ ಸಿ.ರೆಡ್ಡಿ ಅವರು ಹೇಳಿದ್ದರು. ಆದರೆ ನಿನ್ನೆ ಸಂಜೆ ಹೃದಯಾಘಾತಕ್ಕೆ ಒಳಗಾಗಿದ್ದರಿಂದ ಅವರ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದ್ದು, ಇಂದು ಬೆಳಗ್ಗೆಯಿಂದ ಇಸಿಎಂಒ ಉಪಕರಣದ ನೆರವಿನ ಮೂಲಕ ಆಮ್ಲಜನಕವನ್ನು ಪೂರೈಸಲಾಗುತ್ತಿದೆ.

Comments are closed.