ಕೊಚ್ಚಿ: ಕೊಚ್ಚಿಯಲ್ಲಿರುವ ಲೌರ್ಡ್ಸ್ ಚರ್ಚ್ ನ ಪಾದ್ರಿ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದ್ದು, ಎರ್ನಾಕುಲಂ ನ್ಯಾಯಾಲಯ ಆತನಿಗೆ ಎರಡು ಅವಧಿಯ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ.
ಪಾದ್ರಿ ವಿರುದ್ಧ 14 ವರ್ಷದ ಬಾಲಕಿಯನ್ನು ಹಲವು ಬಾರಿ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿತ್ತು. ಪ್ರಕರಣದ ಬಗ್ಗೆ ತೀರ್ಪು ನೀಡಿರುವ ನ್ಯಾಯಾಲಯ ಧರ್ಮ ಗುರು ತನ್ನ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದಿರುವ ನ್ಯಾಯಾಲಯ, ಚರ್ಚ್ ಮೇಲಿರುವ ನಂಬಿಕೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಎಡ್ವಿನ್ ಪಿಗಾರೆಜ್ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಆರೋಪಿಯಾಗಿದ್ದು, ಪಾದ್ರಿಗೆ ಕೇರಳ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ನೆರವು ನೀಡಿದ್ದಕ್ಕೆ ಅವರ ಸಹೋದರ ಸಿಲ್ವೆಸ್ಟರ್ ಪಿಗಾರೆಜ್‌ಗೆ ಕೋರ್ಟ್ ಒಂದು ವರ್ಷ ಸಾದಾ ಶಿಕ್ಷೆ ವಿಧಿಸಿದೆ. ಬಾಲಕಿ ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ಬರುತ್ತಿದ್ದ ಸಂದರ್ಭದಲ್ಲಿ ಪಾದ್ರಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ತಾಯಿ ಪೊಲೀಸರಿಗೆ ದೂರು ನೀಡಿದ್ದರು.