ರಾಷ್ಟ್ರೀಯ

ರಾಷ್ಟ್ರಗೀತೆಯಲ್ಲಿ ವಿಕಲಚೇತನರಿಗೆ ವಿನಾಯಿತಿ

Pinterest LinkedIn Tumblr

suprimನವದೆಹಲಿ: ಸುಪ್ರೀಂ ಕೋರ್ಟ್ ರಾಷ್ಟ್ರಗೀತೆಗೆ ಸಂಬಂಧಿಸಿದ ತನ್ನ ಆದೇಶವನ್ನು ಶುಕ್ರವಾರ ಮಾರ್ಪಡಿಸಿದ್ದು, ವಿಕಲಚೇತನರಿಗೆ ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಎದ್ದುನಿಂತು ರಾಷ್ಟ್ರಗೀತೆ ಹಾಡುವುದರಿಂದ ವಿನಾಯಿತಿ ನೀಡಲಾಗಿದೆ.
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಮೂರ್ತಿ ಅಮಿತವ್ ರಾಯ್ ಅವರನ್ನೊಳಗೊಂಡ ಪೀಠ, ವಿಕಲಚೇತನರು ಕುಳಿತುಕೊಂಡೆ ರಾಷ್ಟ್ರಗೀತೆಗೆ ಗೌರವ ಸಲ್ಲಿಸಬಹುದಾಗಿದೆ ಎಂದು ಹೇಳಿದೆ. ಅಲ್ಲದೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವ ವೇಳೆ ಬಾಗಿಲುಗಳನ್ನು ಮುಚ್ಚಬೇಕಾಗದ ಅಗತ್ಯ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಸರ್ಕಾರದ ಪರ ವಿಚಾರಣೆಗೆ ಹಾಜರಾಗಿದ್ದ ಅಟರ್ನಿ ಜನರಲ್ ಮುಕುಲ್ ರೊಹಟ್ಗಿ ಅವರು, ವಿಕಲಚೇತನರು ರಾಷ್ಟ್ರಗೀತೆಗೆ ಯಾವ ರೀತಿ ಗೌರವ ಸಲ್ಲಿಸಬೇಕು ಎಂಬುದರ ಬಗ್ಗೆ ಮುಂದಿನ 10 ದಿನಗಳಲ್ಲಿ ಕೇಂದ್ರ ಮಾರ್ಗಸೂಚಿಗಳನ್ನು ಹೊರಡಿಸಲಿದೆ ಎಂದು ಕೋರ್ಟ್ ಗೆ ತಿಳಿಸಿದರು. ಬಳಿಕ ಕೋರ್ಟ್ ವಿಚಾರಣೆಯನ್ನು ಫೆಬ್ರವರಿ 14ಕ್ಕೆ ಮುಂದೂಡಿದೆ.
ದೇಶಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲೂ ಸಿನಿಮಾ ಆರಂಭವಾಗುವ ಮುನ್ನ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಹಾಡಬೇಕು ಎಂದು ಕಳೆದ ಡಿಸೆಂಬರ್ 1ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

Comments are closed.