ರಾಷ್ಟ್ರೀಯ

ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತ ಪಕ್ಷದಿಂದ ಕಲಾಪಕ್ಕೆ ಅಡ್ಡಿ: ಕಾಂಗ್ರೆಸ್

Pinterest LinkedIn Tumblr

congress-rajya-sabhaನವದೆಹಲಿ: ಎಂದಿನಂತೆ ಮತ್ತೆ ರಾಜ್ಯಸಭಾ ಕಲಾಪದಲ್ಲಿ ಗದ್ದಲವುಂಟಾಗಿದ್ದು, ಕೇಂದ್ರ ಸರ್ಕಾರದ ವಿರುದ್ದ ವಿರೋಧ ಪಕ್ಷಗಳು ತೀವ್ರವಾಗಿ ವಾಗ್ದಾಳಿ ನಡೆಸುತ್ತಿದೆ.
ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷ ಬಿಜೆಪಿ ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸಲು ಬಿಡುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಹೇಳಿದ್ದಾರೆ.
ಕಲಾಪ ಆರಂಭವಾಗುತ್ತಿದ್ದಂತೆಯೇ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರ ಮೇಲೆ ಕೇಳಿ ಬಂದಿರುವ ರು.450 ಕೋಟಿ ಅವ್ಯವಹಾರ ಆರೋಪ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು ಆರಂಭಿಸಿದ್ದವು. ಇದರಂತೆ ಆಡಳಿತಾರೂಢ ಬಿಜೆಪಿ ಪಕ್ಷ ಕೂಡ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಹಗರಣ ಪ್ರಕರಣವನ್ನು ಪ್ರಸ್ತಾಪ ಮಾಡಿತು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು, ದುಬಾರಿ ನೋಟಿನ ಮೇಲೆ ನಿಷೇಧ ಹೇರಿದ ಬಳಿಕ ರೈತರು ಸಾಕಷ್ಟು ಸಂಕಷ್ಟವನ್ನು ಎದುರಿಸುತ್ತಿದ್ದು, ಬಿಜೆಪಿ ಪಕ್ಷ ರೈತರ ಕುರಿತಂತೆ ಗಮನ ಹರಿಸುತ್ತಿಲ್ಲ. ರೈತರಿಗೆ ಬೆಂಬಲವನ್ನು ನೀಡುತ್ತಿಲ್ಲ ಎಂದು ಹೇಳಿದರು.
ಅಲ್ಲದೆ, ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷ ಬಿಜೆಪಿ ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸಲು ಬಿಡುತ್ತಿಲ್ಲ ಎಂದು ಆರೋಪಿಸಿದರು.
ಈ ವೇಳೆ ವಿರೋಧ ಪಕ್ಷದ ನಾಯಕರು ಹಾಗೂ ಆಡಳಿತರೂಢ ಪಕ್ಷದ ನಾಯಕರ ನಡುವೆ ತೀವ್ರ ಮಾತಿನ ಚಕಮಕಿ ನಡೆದ ಹಿನ್ನಲೆಯಲ್ಲಿ ಕಲಾಪಕ್ಕೆ ತೀವ್ರ ಅಡ್ಡಿಯುಂಟಾಯಿತು. ಮಧ್ಯೆ ಪ್ರವೇಶ ಮಾಡಿದ ಸ್ಪೀಕರ್ ಪಿ.ಜೆ. ಕುರಿಯನ್ ಅವರು, ಸಂಸದರು ಸಮಾಧಾನದಿಂದ ಕುಳಿತುಕೊಳ್ಳುವಂತೆ ಮನವಿ ಮಾಡಿದರು. ಈ ವೇಳೆ ಆಜಾದ್ ಅವರ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದರು.

Comments are closed.