ರಾಷ್ಟ್ರೀಯ

ನೋಟು ನಿಷೇಧವನ್ನು ಹೊಗಳಿದ ಮೋದಿಯವರ ಪತ್ನಿ ಜಶೋದಾ ಬೆನ್

Pinterest LinkedIn Tumblr

jasodaben-finalಕೋಟಾ: ಗರಿಷ್ಠ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾ ಬೆನ್ ಸಂತಸ ವ್ಯಕ್ತ ಪಡಿಸಿದ್ದಾರೆ.

₹500 ಮತ್ತು ₹1000 ಮುಖಬೆಲೆಯ ನೋಟುಗಳನ್ನು ರದ್ದು ಮಾಡುವ ಮೂಲಕ ದೇಶದಲ್ಲಿ ಕಪ್ಪುಹಣ ಮತ್ತು ಭ್ರಷ್ಟಾಚಾರವನ್ನು ನಿಯಂತ್ರಿಸಬಹುದು.

ಕೇಂದ್ರ ಸರ್ಕಾರದ ಈ ನಿರ್ಧಾರ ವಿದೇಶದಲ್ಲಿರುವ ಕಪ್ಪು ಹಣವನ್ನೂ ವಾಪಸ್ ತರಲು ಸಹಾಯ ಮಾಡುತ್ತದೆ ಎಂದು ಮೋದಿ ಪತ್ನಿ ಹೇಳಿದ್ದಾರೆ.

ಮೋದಿ ನೇತೃತ್ವದ ಸರ್ಕಾರದ ಕಾರ್ಯಗಳ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, ದೇಶದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಇಂಥಾ ಕಾರ್ಯಗಳನ್ನು ಮುಂದುವರಿಸಬೇಕಿದೆ ಎಂದು ಜಶೋದಾ ಬೆನ್ ಹೇಳಿದ್ದಾರೆ.

ರಾಜಸ್ತಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ಜಶೋದಾ ಬೆನ್.

Comments are closed.