ರಾಷ್ಟ್ರೀಯ

ಭ್ರಷ್ಟರನ್ನು ಬಚಾವ್ ಮಾಡಲು ವಿಪಕ್ಷಗಳು ಸಂಸತ್ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ: ಮೋದಿ

Pinterest LinkedIn Tumblr

modhiiಕಾನ್ಪುರ್: ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಗದ್ದಲವೆಬ್ಬಿಸುವ ಮೂಲಕ ಕಲಾಪಕ್ಕೆ ಅಡ್ಡಿಯುಂಟುಮಾಡಿದ್ದ ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ.

ಸೋಮವಾರ ಕಾನ್ಪುರದಲ್ಲಿ ಪರಿವರ್ತನಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ನಾನು ಕೆಲವು ದಿನಗಳ ಹಿಂದೆ ಉತ್ತರಪ್ರದೇಶಕ್ಕೆ ಹೋದಾಗ ಗಮನಿಸಿದ ವಿಷಯ ಏನೆಂದರೆ ಅಲ್ಲಿನ ಜನರು ಬದಲಾಗಿದ್ದಾರೆ. ಅಲ್ಲಿ ಬದಲಾವಣೆಯ ಗಾಳಿ ಬೀಸಿದೆ, ಅದು ಬರೀ ಗಾಳಿಯಲ್ಲ ಬಿರುಗಾಳಿ!

ಉತ್ತರ ಪ್ರದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಯೂ ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಕೌಶಲ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳ ಬಗ್ಗೆ ಉಲ್ಲೇಖಿಸಿದ ಮೋದಿ, ವಿಶೇಷವಾಗಿ ಉತ್ತರ ಪ್ರದೇಶದಲ್ಲಿರುವ ಯುವಕರ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದೆ ಎಂದಿದ್ದಾರೆ.

ಅದೇ ವೇಳೆ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ, ಭ್ರಷ್ಟಾಚಾರ ಮತ್ತು ಕಪ್ಪುಹಣವನ್ನು ನಿರ್ಮೂಲನೆ ಮಾಡುವುದು ನಮ್ಮ ಸರ್ಕಾರದ ಉದ್ದೇಶ ಆದರೆ ಸಂಸತ್‍ನಲ್ಲಿ ಕೋಲಾಹಲ ಸೃಷ್ಟಿಸುವುದು ವಿಪಕ್ಷಗಳ ಉದ್ದೇಶ ಎಂದಿದ್ದಾರೆ.

ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಭಯದಿಂದ ಅವರು (ವಿಪಕ್ಷಗಳು) ಸದನದಲ್ಲಿ ಗದ್ದಲವೆಬ್ಬಿಸಿ, ಕಲಾಪಕ್ಕೆ ತಡೆಯೊಡ್ಡುತ್ತಿದ್ದಾರೆ. ನಮ್ಮ ಸರ್ಕಾರ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಬಯಸಿದರೆ, ಅವರು ಭ್ರಷ್ಟರಿಗೆ ಬೆಂಬಲ ನೀಡುತ್ತಾರೆ ಎಂದು ಮೋದಿ ದೂರಿದ್ದಾರೆ.

Comments are closed.