ರಾಷ್ಟ್ರೀಯ

ವಾಜಪೇಯಿ, ಷರೀಫ್ ಜನ್ಮದಿನ… ಕ್ರಿಸ್ ಮಸ್ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

Pinterest LinkedIn Tumblr

modi

ನವದೆಹಲಿ: ಭಾರತ ರತ್ನ ಪ್ರಶಸ್ತಿಗೆ ಭಾಜನರಾದ ಭಾರತದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಶುಭಾಶಯ ಕೋರಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಹಾಗೂ ನವಾಜ್ ಶರೀಫ್ ಅವರ ಹುಟ್ಟಹಬ್ಬ ಒಂದೇ ದಿನವಾಗಿದ್ದು, ಈ ಹಿನ್ನಲೆಯಲ್ಲಿ ಟ್ವಿಟರ್ ಶುಭಾಶಯ ಕೋರಿದ್ದಾರೆ.

ಪ್ರೀತಿಯುತ ಹಾಗೂ ಗೌರವಯುತ ಅಟಲ್ ಬಿಹಾರಿ ವಾಜಪೇಯಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ನೀಡುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ವಾಜಪೇಯಿಯುವರ ಸೇವೆ ಹಾಗೂ ನಾಯಕತ್ವ ದೇಶದ ಅಭಿವೃದ್ಧಿ ಮೇಲೆ ಧನಾತ್ಮಕ ಪರಿಣಾಮವನ್ನು ಬೀರಿತ್ತು ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ, ಬಿಜೆಪಿ ಕಾರ್ಯಕರ್ತನಾಗಿದ್ದ ಸಂದರ್ಭದಲ್ಲಿ ವಾಜಪೇಯಿಯವರನ್ನು ಆಲಂಗಿಸಿ ಶುಭಾಶಯ ಕೋರಿದ್ದ ವಿಡಿಯೋವೊಂದನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ.

ಇದರಂತೆ ಇಂದು ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರೂ ಕೂಡ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ನವಾಜ್ ಷರೀಫ್ ಅವರಿಗೂ ಮೋದಿಯವರು ಶುಭಾಶಯ ಕೋರಿದ್ದಾರೆ. ನವಾಜ್ ಷರೀಫ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆಂದು ಹೇಳಿದ್ದಾರೆ.

ಇಂದು ದೇಶದಾದ್ಯಂತ ಕ್ರಿಸ್ ಮಸ್ ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ದೇಶದ ಜನತೆಗೆ ಶುಭಾಶಯ ಕೋರಿರುವ ಅವರು, ಮೇರಿ ಕ್ರಿಸ್’ಮಸ್! ಯೇಸು ಕ್ರಿಸ್ತನ ಜೀವನ ಹಾಗೂ ಅವರ ಹೇಳಿಕೊಟ್ಟ ಪಾಠವನ್ನು ನಾವು ನೆನೆಯುತ್ತಿದ್ದೇವೆ, ಆಚರಿಸುತ್ತಿದ್ದೇವೆ. ಶಾಂತಿ, ಏಕತೆ ಮತ್ತು ಸಹಾನುಭೂತಿ ನಮಗೆ ಪ್ರೇರಣೆಯಾಗಿದೆ ಎಂದು ತಿಳಿಸಿದ್ದಾರೆ.

Comments are closed.