ಪುಣೆ: 23 ವರ್ಷದ ಇನ್ಫೋಸಿಸ್ ಮಹಿಳಾ ಟೆಕ್ಕಿಯೊಬ್ಬರನ್ನು ನಡು ರಸ್ತೆಯಲ್ಲಿಯೇ ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪುಣೆಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಅಂತರ ದಾಸ್ ಕೊಲೆಯಾದ ಮಹಿಳಾ ಟೆಕ್ಕಿಯಾಗಿದ್ದಾರೆ. ಅಂತರಾ ಅವರು ಪಶ್ಚಿಮ ಬಂಗಾಳದ ಮೂಲದವರಾಗಿದ್ದಾರೆ. ಕಳೆದ ರಾತ್ರಿ 8.00 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಂತರಾ ಅವರ ಮೇಲೆ ದಾಳಿ ಮಾಡಿರುವ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ದಾಳಿ ನಡೆಸಿದ ನಂತರ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅಂತರಾ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಳಸಿದ್ದಾರೆ. ಆದರೆ, ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅಂತರಾ ಅವರು ಸಾವನ್ನಪ್ಪಿದ್ದಾರೆಂದು ಅವರು ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.