ರಾಷ್ಟ್ರೀಯ

ಕಾನ್ಪುರ ಬಳಿ ಕಾನ್ಪುರ-ಸೀಲ್ಡಹ್ ಎಕ್ಸ್ ಪ್ರೆಸ್ ಹಳಿ ತಪ್ಪಿದ ಪರಿಣಾಮ ಇಬ್ಬರು ಪ್ರಯಾಣಿಕರ ಸಾವು; 26 ಮಂದಿಗೆ ಗಾಯ

Pinterest LinkedIn Tumblr

kanpur-trian-accident

ಕಾನ್ಪುರ: ಮತ್ತೊಂದು ರೈಲು ದುರಂತಕ್ಕೆ ಉತ್ತರ ಪ್ರದೇಶ ಸಾಕ್ಷಿಯಾಗಿದ್ದು, ಕಾನ್ಪುರ ಬಳಿ ಕಾನ್ಪುರ-ಸೀಲ್ಡಹ್ ಎಕ್ಸ್ ಪ್ರೆಸ್ ಹಳಿ ತಪ್ಪಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, 26ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕಾನ್ಪುರ-ಸೀಲ್ಡಹ್ ಎಕ್ಸ್ ಪ್ರೆಸ್ ನ ಒಟ್ಟು 15 ಬೋಗಿಗಳು ಹಳಿ ತಪ್ಪಿದ್ದು, ಕಾನ್ಪುರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಕಾಲುವೆ ಅಡ್ಡಲಾಗಿ ಕಟ್ಟಲಾಗಿದ್ದ ರೈಲ್ವೇ ಸೇತುವೆ ದಾಟುತ್ತಿದ್ದಂತೆಯೇ ರೈಲು ಹಳಿ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು. 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ 5 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಸಮೀಪದ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕಾನ್ಪುರಕ್ಕೆ ತೆರಳುತ್ತಿದ್ದ ರೈಲು ಇಂದು ಬೆಳಗ್ಗೆ ಸುಮಾರು 6 ಗಂಟೆ ಹೊತ್ತಿನಲ್ಲಿ ಕಾಲುವೆ ಸೇತುವೆಯನ್ನು ದಾಟುತ್ತಿತ್ತು. ದಟ್ಟ ಮಂಜು ಆವರಿಸಿದ್ದರಿಂದ ಮುಂದಿನ ಹಳಿಗಳು ಅಷ್ಟಾಗಿ ಗೋಚರಿಸುತ್ತಿರಲಿಲ್ಲ ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಥಳೀಯ ಅಗ್ನಿ ಶಾಮಕ ದಳದ ಅಧಿಕಾರಿಗಳು ಕೂಡ ರೈಲ್ವೇ ಪೊಲೀಸರಿಗೆ ಸಾಥ್ ನೀಡುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

Comments are closed.