
ಲಕ್ನೋ: ಹಿರಿಯ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.
1987ರ ಬ್ಯಾಚ್ ನ ಅಧಿಕಾರಿಯಾಗಿದ್ದ ಸಂಜಯ್ ದುಬೆ ಆತ್ಮಹತ್ಯೆಗೆ ಶರಣಾದವರು. ಗೃಹ ರಕ್ಷಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ದುಬೈ ತಮ್ಮ ಗೌತಂಪಳ್ಳಿಯಮ ಮನೆಯ ಸೀಲಿಂಗ್ ಫ್ಯಾನ್ ಗೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಸಂಜಯ್ ದುಬೆ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮ್ಮ ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ,
ಕಳೆದ ಕೆಲವು ತಿಂಗಳಿಂದ ಸಂಜಯ್ ದುಬೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಅವರ ಪತ್ನಿ ಮತ್ತು ಮಗಳು ಗುರಂಗಾವ್ ನಲ್ಲಿ ವಾಸಿಸುತ್ತಿದ್ದಾರೆ.
ರಾಷ್ಟ್ರೀಯ
Comments are closed.