ನವದೆಹಲಿ: ಜನರಲ್ ಬಿಪಿನ್ ರಾವತ್ ಅವರು ಸೇನಾ ಪಡೆಯ 27ನೇ ಮುಖ್ಯಸ್ಥರಾಗಿ ಶನಿವಾರ ಅಧಿಕಾರಿ ವಹಿಸಿಕೊಂಡರು.
ಸೇನಾ ಪಡೆ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಸುಹಾಗ್ ಅವರ ಅಧಿಕಾರಾವಧಿ ಡಿಸೆಂಬರ್ 31ರಂದು ಕೊನೆಗೊಂಡಿದ್ದು, ಬಿಪಿನ್ ರಾವತ್ ಅವರು ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿದರು.
1978ರಲ್ಲಿ ರಾವತ್ ಅವರು ಗೋರ್ಖಾ ರೈಫಲ್ಸ್ ಪಡೆಗೆ ನೇಮಕಗೊಳ್ಳುವ ಮೂಲಕ ಭಾರತೀಯ ಸೇನೆಯಲ್ಲಿ ಕರ್ತವ್ಯ ಪ್ರಾರಂಭಿಸಿದರು.