ರಾಷ್ಟ್ರೀಯ

ಸಮಾಜವಾದಿ ಪಕ್ಷಕ್ಕೆ ಅಖಿಲೇಶ್ ಯಾದವ್ ಅವರನ್ನು ಮತ್ತೆ ಸೇರಿಸಿಕೊಂಡ ಮುಲಾಯಂ

Pinterest LinkedIn Tumblr

akilesh-yadav
ಲಕ್ನೋ: ತಮ್ಮ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್‌ಗೋಪಾಲ್‌ ಯಾದವ್ ಅವರನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್‌ ಯಾದವ್ ಇಂದು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ.

ಶುಕ್ರವಾರ ರಾತ್ರಿ ಸುದ್ದಿಗೋಷ್ಠಿ ನಡೆಸಿದ ಮುಲಾಯಂ, ತಮ್ಮ ಪುತ್ರ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ರಾಮ್‌ಗೋಪಾಲ್‌ ಯಾದವ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಹೊರ ಹಾಕಿರುವುದಾಗಿ ನಿರ್ಧಾರ ಪ್ರಕಟಿಸಿದ್ದರು.
ಈ ನಿರ್ಧಾರ ತೆಗೆದುಕೊಂಡ 24 ಗಂಟೆಗಳೊಳಗೆ ಮುಲಾಯಂ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ.

ಅಖಿಲೇಶ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದ ತೀರ್ಮಾನವನ್ನು ವಾಪಸ್ ತೆಗೆದುಕೊಳ್ಳುವಂತೆ ಕೆಲವು ನಾಯಕರು ಒತ್ತಾಯಿಸಿದ್ದರು.

ಈ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳಲು ಇಂದು ಮಧ್ಯಾಹ್ನ ಮುಲಾಯಂ ಅವರ ಮನೆಯಲ್ಲಿ ಪಕ್ಷದ ವರಿಷ್ಠರ ಸಭೆ ಕರೆಯಲಾಗಿತ್ತು.

ಸಮಾಜವಾದಿ ಪಕ್ಷದ ಹಿರಿಯ ನಾಯಕ ಮತ್ತು ಸಚಿವ ಅಜಂ ಖಾನ್ ಅವರು ಈ ಸಭೆ ಕರೆದಿದ್ದು, ಸಭೆಯಲ್ಲಿ ಅಖಿಲೇಶ್ ಮತ್ತು ರಾಮ್‍ಗೋಪಾಲ್ ಯಾದವ್ ಅವರನ್ನು ಪಕ್ಷಕ್ಕೆ ಕರೆಸಿಕೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು.

Comments are closed.