ರಾಷ್ಟ್ರೀಯ

ಧಾರ್ಮಿಕ ಸಂಘಟನೆಗಳಿಂದ ಸುಪ್ರೀಂ ತೀರ್ಪು ಸ್ವಾಗತ

Pinterest LinkedIn Tumblr

suprim
ನವದೆಹಲಿ: ಯಾವುದೇ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಜಾತಿ, ಮತ ಮತ್ತು ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ವಿವಿಧ ಧಾರ್ಮಿಕ ಸಂಘಟನೆಗಳು ಸ್ವಾಗತಿಸಿವೆ.
ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಶ್ವಹಿಂದೂ ಪರಿಷತ್ ಜಾತಿ, ಧರ್ಮದ ಆಧಾರದಲ್ಲಿ ನಡೆಯುತ್ತಿರುವ ರಾಜಕೀಯ ದೇಶಕ್ಕೆ ಹಾನಿ ಉಂಟು ಮಾಡಿದೆ, ಆದ್ದರಿಂದ ಸುಪ್ರೀಂ ಕೋಟ್ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ವಿಹೆಚ್ ಪಿಯ ಸುರೇಂದ್ರ ಜೈನ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಿಂದ ವೋಟ್ ಬ್ಯಾಂಕ್ ರಾಜಕೀಯ ಕೊನೆಯಾಗಬೇಕು, ರಾಷ್ಟ್ರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ನ ಈ ತೀರ್ಪು ಮೈಲುಗಲ್ಲಾಗಲಿದೆ ಎಂದು ವಿಹೆಚ್ ಪಿ ಅಭಿಪ್ರಾಯಪಟ್ಟಿದೆ. ಇನ್ನು ಜಮಾತ್-ಎ-ಇಸ್ಲಾಮಿ ಹಿಂದ್ ಸಂಘಟನೆ ಸಹ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಕೋರ್ಟ್ ನ ತೀರ್ಪನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಹೇಳಿದೆ.

Comments are closed.