
ನವದೆಹಲಿ: ಭಾರಿ ನಿರೀಕ್ಷೆಯನ್ನು ಹುಟ್ಟುಹಾಕಿರುವ ಪಂಚರಾಜ್ಯಗಳ ಚುನಾವಣೆ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.
ಫೆಬ್ರುವರಿ 4 ರಿಂದ ಮಾರ್ಚ್ 8ರ ವರೆಗೆ ಪಂಜಾಬ್, ಗೋವಾ, ಉತ್ತರಾಖಂಡ, ಮಣಿಪುರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಮಾರ್ಚ್ 11ರಂದು ಐದು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.
ಗೋವಾ: ದಕ್ಷಿಣ ಬಾರತದ ಗೋವಾ ರಾಜ್ಯದಲ್ಲಿ ಫೆಬ್ರುವರಿ 4ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಒಟ್ಟು 40 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಪಂಜಾಬ್: 117 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪಂಜಾಬ್ ರಾಜ್ಯದಲ್ಲಿ ಫೆಬ್ರುವರಿ 4 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಉತ್ತರಾಖಂಡ: 71 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಉತ್ತರಾಖಂಡ ರಾಜ್ಯದಲ್ಲಿ ಫೆಬ್ರುವರಿ 15 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಮಣಿಪುರ : ಈಶಾನ್ಯ ಭಾರತದ ಮಣಿಪುರ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 4 ಹಾಗೂ ಮಾರ್ಚ್ 8ರಂದು ಮತದಾನ ನಡೆಲಿದೆ. ಮಣಿಪುರದಲ್ಲಿ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿವೆ.
ಉತ್ತರಪ್ರದೇಶ: ದೇಶದ ದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಫೆಬ್ರುವರಿ 11ರಿಂದ ಮಾರ್ಚ್ 8ರ ವರೆಗೆ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದ 403 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
Comments are closed.