ರಾಷ್ಟ್ರೀಯ

ಉತ್ತರ ಪ್ರದೇಶ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಜಾತ್ಯಾತೀತ ಪಕ್ಷಗಳು ಒಂದಾಗುವಂತೆ ಕಾಂಗ್ರೆಸ್ ಕರೆ

Pinterest LinkedIn Tumblr

Gulam
ನವದೆಹಲಿ (ಜ.04): ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಜಾತ್ಯಾತೀತ ಪಕ್ಷಗಳು ಒಂದಾಗುವಂತೆ ಕಾಂಗ್ರೆಸ್ ಕರೆ ನೀಡಿದೆ.
ಉತ್ತರ ಪ್ರದೇಶದಲ್ಲಿ ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬಾರದಿರಬೇಕಾದರೆ ಜಾತ್ಯತೀತ ಪಕ್ಷಗಳು ಒಂದಾಗಬೇಕು. ಕೋಮುವಾದ ವಿರುದ್ಧ ಹೋರಾಟದಲ್ಲಿ ಇತರ ಪಕ್ಷಗಳನ್ನು ಕಾಂಗ್ರೆಸ್ ಬೆಂಬಲಿಸುತ್ತದೆ, ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬೀ ಆಝಾದ್ ಹೇಳಿದ್ದಾರೆ.
ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡುವ ಕುರಿತು ಕೇಳಲಾದ ಪ್ರಶ್ನೆಗೆ, ಸಮಾಜವಾದಿ ಪಕ್ಷದ ಆಂತರಿಕ ಸಮಸ್ಯೆಗಳು ಬಗೆಹರಿದ ಬಳಿಕ ಆ ಬಗ್ಗೆ ತೀರ್ಮಾನಿಸಲಾಗುವುದೆಂದು, ಆಝಾದ್ ಹೇಳಿದ್ದಾರೆ.
ಸಮಾಜವಾದಿ ಪಕ್ಷದ ಳಜಗಳದಿಂದ ಪ್ರಯೋಜನ ಪಡೆಯುವ ಇರಾದೆಯೂ ನಮಗಿಲ್ಲ, ನಾವು ಅದಕ್ಕೆ ಕಾರಣರೂ ಅಲ್ಲ. ನಾವು 403 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದೇವೆ. ಸಮಾಜವಾದಿ ಪಕ್ಷದ ಆಂತರಿಕ ಸಮಸ್ಯೆಗಳು ಬಗೆಹರಿದ ಬಳಿಕವಷ್ಟೇ ಮೈತ್ರಿಯ ಕುರಿತು ನಿರ್ಧಾರ ಕೈಗೊಳ್ಳಬಹುದು, ಎಂದು ಆಝಾದ್ ಹೇಳಿದ್ದಾರೆ.

Comments are closed.