ರಾಷ್ಟ್ರೀಯ

ಮಧ್ಯಪ್ರದೇಶದಲ್ಲಿ ಗುಂಡಿನ ದಾಳಿಗೆ ಕಾಂಗ್ರೆಸ್ ಮುಖಂಡನ ಕಗ್ಗೊಲೆ

Pinterest LinkedIn Tumblr

ಜಬಲ್ ಪುರ: ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಕಾಂಗ್ರೆಸ್ ಮುಖಂಡ ನ ಕೊಲೆಯಾಗಿದ್ದು ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದಾನೆ.

ಮಧ್ಯ ಪ್ರದೇಶದ ಜಬಲ್ ಪುರದಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಮುಖಂಡ ರಾಜು ಮಿಶ್ರಾ ಸಾವನ್ನಪ್ಪಿದ್ದಾರೆ, ಮತ್ತೊರ್ವ ಕುಕ್ಕು ಸರ್ದಾರ್ ಎಂಬಾತ ಗಾಯಗೊಂಡಿದ್ದು ಆತನಿಗೆ ಚಿಕಿತ್ಸೆ ಕೊಡಿಸಲಾಗಿದೆ.

ನಿನ್ನೆ ರಾತ್ರಿ ಸುಮಾರು 10 ಗಂಟೆ ವೇಳೆಯಲ್ಲಿ ದುಷ್ಕರ್ಮಿಗಳು 14 ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸಂತ್ರಸ್ತರು ಹೋಟೆಲ್ ಬಳಿ ನಿಂತಿದ್ದರು. ಹಿಂದಿನಿಂದ ಬಂದ ಆರೋಪಿಗಳು ಕೃತ್ಯ ನಡೆಸಿದ್ದಾರೆ.

ರಕ್ತದ ಮಾದರಿ ಹಾಗೂ ಬುಲೆಟ್ ಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ದಾಳಿಗೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸಿದ್ದಾರೆ.

Comments are closed.