
ಪಾಟ್ನಾ: ಗುರು ಗೋವಿಂದ್ ಸಿಂಗ್ ಅವರ 350 ನೇ ಜಯಂತಿ ಅಂಗವಾಗಿ ಬಿಹಾರದಲ್ಲಿ ಆಯೋಜಿಸಲಾಗಿದ್ದ ಪ್ರಕಾಶ್ ಉತ್ಸವದಲ್ಲಿ ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ ನಿತೀಶ್ ಕುಮಾರ್ ಅವರ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಿಹಾರದಲ್ಲಿ ಪ್ರಕಾಶ್ ಉತ್ಸವ ಆಯೋಜಿಸಿರುವುದಕ್ಕೆ ಹಾಗೂ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡಿರುವ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದು, ಮದ್ಯ ನಿಷೇಧ ಮಾಡಿರುವ ನಿತೀಶ್ ಕುಮಾರ್ ಅವರ ಕ್ರಮವನ್ನು ಪಕ್ಷಾತೀತವಾಗಿ ಬೆಂಬಲಿಸಬೇಕೆಂದು ಕರೆ ನೀಡಿದ್ದಾರೆ.
ಪ್ರಕಾಶ್ ಉತ್ಸವವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರಕಾಶ್ ಉತ್ಸವವನ್ನು ಆಯೋಜಿಸಿರುವ ಬಿಹಾರದ ಸಿಎಂ ನಿತೀಶ್ ಕುಮಾರ್, ಬಿಹಾರದ ಜನತೆ ಅಭಿನಂದನಾರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಹಾರವನ್ನು ಮದ್ಯಮುಕ್ತವಾಗಿಸುವುದಕ್ಕೆ ನಿತೀಶ್ ಕುಮಾರ್ ಮದ್ಯ ನಿಷೇಧ ಕ್ರಮ ಕೈಗೊಂಡಿರುವುದು ದಿಟ್ಟ ನಿರ್ಧಾರವಾಗಿದೆ. ಸಾಮಾಜಿಕ ಬದಲಾವಣೆಗಾಗಿ ಕಠಿಣ ನಿರ್ಧಾರಗಳನ್ನು ಕೈಗೊಳ್ಳುವುದು ಸವಾಲಿನ ಸಂಗತಿಯಾಗಿದೆ. ನಿತೀಶ್ ಕುಮಾರ್ ರಾಜ್ಯದಲ್ಲಿ ಮದ್ಯವನ್ನು ಸಂಪೂರ್ಣವಾಗಿ ನಿಷೇಧಿಸುವ ಮೂಲಕ ಅಂತಹ ನಿರ್ಧಾರ ಕೈಗೊಂಡಿದ್ದಾರೆ ಪಕ್ಷಾತೀತವಾಗಿ ಎಲ್ಲರೂ ಸ್ವಾಗತಿಸಬೇಕೆಂದು ಕರೆ ನೀಡಿದ್ದಾರೆ.
ಪ್ರಕಾಶ್ ಉತ್ಸವದಲ್ಲಿ ಪಂಜಾಬ್ ನ ಸಿಎಂ ಪ್ರಕಾಶ್ ಸಿಂಗ್ ಬಾದಲ್, ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್, ರವಿಶಂಕರ್ ಪ್ರಸಾದ್ ಭಾಗವಹಿಸಿದ್ದರು.
ರಾಷ್ಟ್ರೀಯ
Comments are closed.