ರಾಷ್ಟ್ರೀಯ

ಪಕ್ಷದ ಬ್ಯಾಂಕ್ ಖಾತೆಯಲ್ಲಿದ್ದ 500 ಕೋಟಿ ಜಪ್ತಿಗೆ ಅಖಿಲೇಶ್ ಯಾದವ್ ಸೂಚನೆ

Pinterest LinkedIn Tumblr


ಲಖನೌ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಬಿಕ್ಕಟ್ಟು ಮುಂದುವರೆದಿದ್ದು ಅಖಿಲೇಶ್ ಯಾದವ್ ಪಕ್ಷವನ್ನು ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿರುವುದು ಸ್ಪಷ್ಟವಾಗಿದೆ.
ಸಮಾಜವಾದಿ ಪಕ್ಷದ ರಾಷ್ಟ್ರಾಧ್ಯಕ್ಷನೆಂದು ಘೋಷಿಸಿಕೊಂಡಿರುವ ಅಖಿಲೇಶ್ ಯಾದವ್, ಪಕ್ಷದ ಮೇಲೆ ಹಿಡಿತ ಸಾಧಿಸಿ ಮುಲಾಯಂ ಸಿಂಗ್ ಯಾದವ್ ಅವರನ್ನು ಮೂಲೆಗುಂಪು ಮಾಡಿದ್ದಾರೆ ಎಂಬ ಈಗಾಗಲೇ ಪಕ್ಷದಿಂದಲೇ ಕೇಳಿಬರುತ್ತಿದೆ. ಈ ನಡುವೆ ಅಖಿಲೇಶ್ ಯಾದವ್ ಅವರ ಬೆಂಬಲಿಗರು ಸಮಾಜವಾದಿ ಪಕ್ಷದ ಸುಮಾರು 500 ಕೋಟಿ ರೂ ಮೊತ್ತದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಬೇಕೆಂದು ಬ್ಯಾಂಕ್ ಗೆ ಮನವಿ ಮಾಡಿದ್ದಾರೆ. ಪರಿಣಾಮವಾಗಿ ಮುಲಾಯಂ ಸಿಂಗ್ ಬಣದಲ್ಲಿ ಗುರುತಿಸಿಕೊಂಡಿದ್ದ ಎಸ್ ಪಿ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್ ಅವರ ಸಹಿಯಿಂದಲೇ ನಡೆಯಬೇಕಿದ್ದ ಪಕ್ಷಕ್ಕೆ ಸಂಬಂಧಿಸಿದ ಬ್ಯಾಂಕ್ ವ್ಯವಹಾರಗಳು ಸ್ಥಗಿತಗೊಂಡಿವೆ.
ಅಖಿಲೇಶ್ ಯಾದವ್ 209 ಶಾಸಕರು 51 ಎಂಎಲ್ ಸಿ ಗಳ ಬೆಂಬಲವಿದ್ದು, ಮುಲಾಯಂ ಸಿಂಗ್ ಯಾದವ್ ಪಕ್ಷದಲ್ಲಿ ಮೂಲೆಗಿಂಪಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಬೆನ್ನಲ್ಲೇ ಶಿವಪಾಲ್ ಯಾದವ್ ಅಖಿಲೇಶ್ ಯಾದವ್ ನ್ನು ಭೇಟಿ ಮಾಡಿದ್ದು, ಬಿಕ್ಕಟ್ಟು ಶಮನಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Comments are closed.