ರಾಷ್ಟ್ರೀಯ

ಉತ್ತರ ಪ್ರದೇಶದ ಬರೇಲಿ ಸಮೀಪ ನಿಂತಿದ್ದ ಬಸ್ ಗೆ ಮತ್ತೊಂದು ಬಸ್ ಡಿಕ್ಕಿ; ಕನಿಷ್ಟ 6 ಸಾವು, 30 ಮಂದಿಗೆ ಗಾಯ

Pinterest LinkedIn Tumblr

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿ, 30 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಬರೇಲಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 24ರಲ್ಲಿ ದುರಂತ ಸಂಭವಿಸಿದ್ದು, ನಿಂತಿದ್ದ ಬಸ್ ಗ್ ಮತ್ತೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಸುಮಾರು 6 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂತೆಯೇ 30 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ವಿಚಾರ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಪೊಲೀಸರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Comments are closed.