ರಾಷ್ಟ್ರೀಯ

ಜಲ್ಲಿಕಟ್ಟು ಮೇಲಿನ ನಿಷೇಧ ತೆರವಿಗೆ ಸುಪ್ರೀಂ ನಕಾರ

Pinterest LinkedIn Tumblr


ನವದೆಹಲಿ: ತಮಿಳುನಾಡಿನ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆ ಮೇಲಿನ ನಿಷೇಧ ತೆರವುಗೊಳಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿರುವುದರಿಂದ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಜಲ್ಲಿಕಟ್ಟು ಕ್ರೀಡೆಯ ಮೇಲಿನ ನಿಷೇಧವನ್ನು ತೆರವುಗೊಳಿಸುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ಜಲ್ಲಿಕಟ್ಟು ಸಂಬಂಧ ನಿಷೇಧವನ್ನು ತೆರವುಗೊಳಿಸಿ ಎಂದು ಕೋರಿರುವುದು ಸರಿಯಲ್ಲ, ಇದು ಸಮಂಜಸವು ಅಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಸುಪ್ರೀಂ ಕೋರ್ಟ್‌ನ ಈ ಆದೇಶದಿಂದ ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರಗಳ ಮುಂದಿನ ನಡೆ ಕುತೂಹಲಕಾರಿಯಾಗಿದೆ.

Comments are closed.