ರಾಷ್ಟ್ರೀಯ

ಗಾಳಿಪಟ ಉತ್ಸವದ ವೇಳೆ ಮಗುಚಿ ಬಿದ್ದ ದೋಣಿ; ಮೃತಪಟ್ಟವರ ಸಂಖ್ಯೆ 24ಕ್ಕೇರಿಕೆ, ಹಲವರು ನಾಪತ್ತೆ

Pinterest LinkedIn Tumblr

ಪಾಟ್ನಾ : ಬಿಹಾರದ ಪಾಟ್ನಾದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಗಾಳಿಪಟ ಉತ್ಸವದ ವೇಳೆ ದೋಣಿ ಮಗುಚಿ ಬಿದ್ದು ಮೃತಪಟ್ಟವರ ಸಂಖ್ಯೆ 24ಕ್ಕೇರಿದ್ದು, ಅನೇಕ ಮಂದಿ ನಾಪತ್ತೆಯಾಗಿದ್ದಾರೆ.

ಪಾಟ್ನಾದ ಗಂಗಾನದಿಯಲ್ಲಿ ಈ ದುರಂತ ಸಂಭವಿಸಿದೆ.ದೋಣಿಯಲ್ಲಿ 80 ಜನ ಇದ್ದರೆಂದು ಹೇಳಲಾಗಿದೆ. ಅದರಲ್ಲೆ 24 ಜನ ಸಾವನ್ನಪ್ಪಿದ್ದಾರೆ. ನಾಪತ್ತೆಯಾದವರ ಸಂಖ್ಯೆ ಇನ್ನೂ ನಿಖರವಾಗಿ ಸಿಕ್ಕಿಲ್ಲ. ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.

ರಾಜ್ಯ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಗಾಳಿ ಪಟ ಸ್ಪರ್ದೆಯಲ್ಲಿ ಜನಜಂಗುಳಿ ಹೆಚ್ಚಿದ ಪರಿಣಾಮ ಈ ದುಂರತ ಸಂಭವಿಸಿದೆ. ಉತ್ಸವದಲ್ಲಿ ಭಾಗವಹಿಸಲು ಹೆಚ್ಚಿನ ಜನ ಆಗಮಿಸಿದ್ದರು. ಆದರೆ ಅವರಿಗೆ ಅಗತ್ಯ ವಾದಷ್ಟು ಸಂಖ್ಯೆಯಲ್ಲಿ ದೋಣಿಗಳು ಇರಲಿಲ್ಲ, ದೋಣಿಯಲ್ಲಿ ಮಿತಿಗಿಂತ ಹೆಚ್ಚಿನ ಜನರನ್ನು ತುಂಬಿದ್ದು ದುರಂತಕ್ಕೆ ಕಾರಣ ಎಂದು ಕೆಲ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ತಡರಾತ್ರಿಯವರೆಗೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿತ್ತು. ರಕ್ಷಣಾ ತಂಡ 8 ಜನರನ್ನು ಪಾರು ಮಾಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಣೆಯಾದವರಿಗಾಗಿ ಹುಡುಕಾಟ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತಾಪ ಸೂಚಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತನಿಖೆಗೆ ಆದೇಶಿಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ಧನ ನೀಡುವಂತೆ ನಿತೀಶ್ ಕುಮಾರ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಉತ್ತರಪ್ರದೇಶದ ನಿಯಮದ ಪ್ರಕಾರ ದುರಂತದಲ್ಲಿ ಮೃತಪಟ್ಟರೆ ಅಂಥವರ ಕುಟುಂಬಕ್ಕೆ ನಾಲ್ಕು ಲಕ್ಷ ರೂ. ಪರಿಹಾರ ದೊರೆಯಲಿದೆ.

ದುರಂತ ನಡೆದು 45 ನಿಮಿಷಗಳ ನಂತರ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿತು. ಇದರಿಂದಾಗಿ ಸಾವಿನ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ, ದೋಣಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ದುರಂತ ಸಂಭವಿಸಿದೆ ಎಂದು ಕೆಲ ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

Comments are closed.