ರಾಷ್ಟ್ರೀಯ

ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್‌–ಸಮಾಜವಾದಿ ಪಕ್ಷ ಮೈತ್ರಿ!

Pinterest LinkedIn Tumblr


ಲಕ್ನೋ: ಉತ್ತರ ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಳ್ಳಲಿದೆ ಎಂದು ಕಾಂಗ್ರೆಸ್‌ ನಾಯಕ ಗುಲಾಂ ನಬಿ ಆಜಾದ್‌ ತಿಳಿಸಿದರು.

ಅಖಿಲೇಶ್‌ ಯಾದವ್‌ ಅವರ ನಾಯಕತ್ವದಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷದ ಮೈತ್ರಿ ನಡೆಯಲಿದೆ ಎಂದು ಎಐಸಿಸಿ ಉತ್ತರ ಪ್ರದೇಶದ ಉಸ್ತುವಾರಿ ಹೊತ್ತಿರುವ ಗುಲಾಂ ನಬಿ ಆಜಾದ್‌ ಮಾಹಿತಿ ನೀಡಿದರು.

ಸೈಕಲ್‌ ಚಿಹ್ನೆಯನ್ನು ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌, ಕಾಂಗ್ರೆಸ್‌ ಜತೆಗಿನ ಮೈತ್ರಿ ಕುರಿತು ಕೆಲವೇ ದಿನಗಳಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದರು.

403 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳ ಸೀಟು ಹಂಚಿಕೆ ಕುರಿತು ಚರ್ಚೆ ನಡೆಯುತ್ತಿದೆ.

ಪ್ರಚಾರದಲ್ಲಿ ಲಾಲೂ: ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಅವರು ಬಿಹಾರ ಉಪ–ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಜತೆಗೂಡಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಪರ ಪ್ರಚಾರ ಮಾಡುವುದಾಗಿ ಪಟನಾದಲ್ಲಿ ಮಂಗಳವಾರ ತಿಳಿಸಿದ್ದಾರೆ.

Comments are closed.