
ನವದೆಹಲಿ: ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಅವರ ಶೈಕ್ಷಣಿಕ ಅರ್ಹತೆ ವಿವಾದಕ್ಕೆ ಸಂಬಂಧಿಸಿದಂತೆ ಅವರ 10 ಮತ್ತು 12 ನೇ ತರಗತಿಯ ಅಂಕಪಟ್ಟಿಯನ್ನು ಬಹಿರಂಗಗೊಳಿಸಬೇಕು ಎಂದು ಮಾಹಿತಿ ಹಕ್ಕು ಕಾಯಿದೆ ಮೂಲಕ ಅರ್ಜಿ ಸಲ್ಲಿಸಲಾಗಿತ್ತು.
ಆದರೆ ತನ್ನ ಅಂಕಪಟ್ಟಿಯನ್ನು ಬಹಿರಂಗ ಪಡಿಸಬೇಡಿ ಎಂದು ಸ್ಮೃತಿ ದೆಹಲಿ ವಿಶ್ವವಿದ್ಯಾನಿಲಯಕ್ಕೆ ಮನವಿ ಮಾಡಿರುವುದಾಗಿ ಸ್ಕೂಲ್ ಆಫ್ ಓಪನ್ ಲರ್ನಿಂಗ್, ಕೇಂದ್ರ ಮಾಹಿತಿ ಆಯೋಗಕ್ಕೆ ಹೇಳಿದೆ.
ಇದೀಗ ಸ್ಮೃತಿ ಅವರ ಶೈಕ್ಷಣಿಕ ದಾಖಲೆಗಳನ್ನು ತಮಗೆ ಸಲ್ಲಿಸುವಂತೆ ಆಯೋಗವು ಸ್ಕೂಲ್ ಆಫ್ ಓಪನ್ ಲರ್ನಿಂಗ್ಗೆ ಸೂಚಿಸಿದೆ.
ಈ ಬಗ್ಗೆ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯವರಿಗೆ ನೀಡಲಾದ ಶೋಕಾಸ್ ನೋಟಿಸ್ನಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಲು ದೆಹಲಿ ವಿಶ್ವವಿದ್ಯಾನಿಲಯ ವಿಫಲವಾಗಿದೆ ಎಂದು ಉಲ್ಲೇಖಿಸಲಾಗಿದೆ.
Comments are closed.