ರಾಷ್ಟ್ರೀಯ

ಬಸ್ – ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 25 ಶಾಲಾ ಮಕ್ಕಳು ಬಲಿ

Pinterest LinkedIn Tumblr

ಅಲಿಗಂಜ್(ಉತ್ತರಪ್ರದೇಶ): ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 25 ಶಾಲಾ ಮಕ್ಕಳು ದಾರುಣ ಸಾವನ್ನಪ್ಪಿದ್ದಾರೆ.

ಉತ್ತರಪ್ರದೇಶದ ಅಲಿಗಂಜ್ ನಲ್ಲಿ ದಟ್ಟ ಮಂಜು ಆವರಿಸಿದ್ದು ರಸ್ತೆ ಕಾಣದೆ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸೇರಿ 26 ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 30ಕ್ಕೂ ಶಾಲಾ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೆಎಸ್ ಪಬ್ಲಿಕ್ ಶಾಲೆಯ 50 ಮಂದಿ ಮಕ್ಕಳನ್ನು ಬಸ್ ಹೊತ್ತೊಯ್ಯುತ್ತಿತ್ತು. ದಟ್ಟ ಮಂಜಿನಿಂದಾಗಿ ರಸ್ತೆ ಕಾಣದೆ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Comments are closed.