ರಾಷ್ಟ್ರೀಯ

2017ನೇ ಸಾಲಿನ ಬಜೆಟ್ ನಲ್ಲಿ ಚುನಾವಣೆ ನಡೆಯುತ್ತಿರುವ ಐದು ರಾಜ್ಯಗಳಿಗೆ ಯಾವುದೇ ಘೋಷಣೆ ಮಾಡುವಂತಿಲ್ಲ; ಕಟ್ಟುನಿಟ್ಟಿನ ಸೂಚನೆ ನೀಡಿದ ಚುನಾವಣಾ ಆಯೋಗ

Pinterest LinkedIn Tumblr

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ 2017ನೇ ಸಾಲಿನ ಬಜೆಟ್ ನಲ್ಲಿ ಚುನಾವಣೆ ನಡೆಯುತ್ತಿರುವ ಐದು ರಾಜ್ಯಗಳಿಗೆ ಯಾವುದೇ ಘೋಷಣೆ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಇದೇ ಫೆಬ್ರವರಿ 1ರಂದು ನಡೆಯಲಿರುವ ಕೇಂದ್ರ ಬಜೆಟ್ ಗೆ ಚುನಾವಣಾ ಆಯೋಗ ಷರತ್ತು ಬದ್ಧ ಅನುಮತಿ ನೀಡಿದ್ದು, ಸೋಮವಾರ ಈ ಬಗ್ಗೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದು, ಚುನಾವಣೆ ಘೋಷಣೆಯಾಗಿರುವ ಐದು ರಾಜ್ಯಗಳಿಗೆ ಸಂಬಂಧಿಸಿದ ಅಭಿವೃದ್ಧಿ ಕೆಲಸಗಳನ್ನಾಗಲಿ ಅಥವಾ ಆ ರಾಜ್ಯಗಳಿಗೆ ಸಂಬಂಧಿಸಿದ ಯೋಜನೆಗಳನ್ನಾಗಲಿ ಈ ಬಾರಿ ಬಜೆಟ್ ನಲ್ಲಿ ಘೋಷಣೆ ಮಾಡುವಂತಿಲ್ಲ ಎಂದು ಹೇಳಿದೆ.

“ನ್ಯಾಯಯುತ ಮತ್ತು ಮುಕ್ತ ಚುನಾವಣಾ ಪ್ರಕ್ರಿಯೆಗಾಗಿ ಆಯೋಗ ಕೇಂದ್ರ ಸರ್ಕಾರಕ್ಕೆ ಕೆಲವು ಸೂಚನೆಗಳನ್ನು ನೀಡುತ್ತಿದ್ದು, ಚುನಾವಣೆ ನಡೆಯುತ್ತಿರುವ ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳಿಗೆ ಸಂಬಂಧಿಸಿದಂತೆ ಯಾವುದೇ ಘೋಷಣೆ ಮಾಡದಂತೆ ಮತ್ತು ಬಜೆಟ್ ಭಾಷಣದಲ್ಲಿ ಆ ರಾಜ್ಯಗಳ ಕುರಿತು ಮಾಹಿತಿಯನ್ನು ಪ್ರಸ್ತಾಪ ಮಾಡಂತೆ ಸೂಚನೆ ನೀಡಲಾಗಿದೆ. ಬಜೆಟ್ ನಲ್ಲಿ ಈ ರಾಜ್ಯಗಳಿಗೆ ಸಂಬಂಧಿಸಿದ ಯಾವುದೇ ಘೋಷಣೆಗಳು ಮತದಾರನ ಮೇಲೆ ಪರಿಣಾಮ ಬೀರುವು ಸಾಧ್ಯತೆ ಇರುವುದರಿಂದ ಈ ಕ್ರಮಕ್ಕೆ ಮುಂದಾಗಿದ್ದೇವೆ” ಎಂದು ಕೇಂದ್ರ ಚುನವಣಾ ಆಯೋಗದ ಕಾರ್ಯದರ್ಶಿ ಪಿಕೆ ಸಿನ್ಹಾ ಹೇಳಿದ್ದಾರೆ.

ಇದೇ ಫೆಬ್ರವರಿ 4ರಿಂದ ಮಾರ್ಚ್ 8ರವೆರಗೆ ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮಾರ್ಚ್ 11 ಫಲಿತಾಂಶ ಪ್ರಕಟವಾಗಲಿದೆ.

Comments are closed.