ರಾಷ್ಟ್ರೀಯ

ಜಲ್ಲಿಕಟ್ಟು ಪ್ರತಿಭಟನೆ ಹಿಂಸಾಚಾರ; ಪೊಲೀಸರ ಕ್ರಮವನ್ನು ಸ್ವಾಗತಿಸಿದ ಸುಬ್ರಮಣಿಯನ್ ಸ್ವಾಮಿ

Pinterest LinkedIn Tumblr

ನವದೆಹಲಿ: ಚೆನ್ನೈನ ಮರಿನಾ ಬೀಚ್ ನಲ್ಲಿ ಶಾಂತವಾಗಿ ನಡೆಯುತ್ತಿದ್ದ ಜಲ್ಲಿಕಟ್ಟು ಪ್ರತಿಭಟನೆ ಉಗ್ರರೂಪ ತಾಳಲು ನಕ್ಸಲರು, ಜಿಹಾದಿಗಳು ಮತ್ತು ಪೊರ್ಕಿಗಳು ಕಾರಣ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದು ಅಲ್ಲದೇ ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಜಲ್ಲಿಕಟ್ಟು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆ ಪ್ರತಿಭಟನೆಯನ್ನು ನಿಯಂತ್ರಿಸಲು ರಾಜ್ಯಕ್ಕೆ ಸಿಆರ್‌ಪಿಎಫ್, ಬಿಎಸ್‌ಎಫ್ ಮತ್ತು ಸೇನೆಯನ್ನು ಕಳುಹಿಸಿ, ರಾಜ್ಯದಲ್ಲಿ ನೆಲೆಯೂರಿರುವ ನಕ್ಸಲರು, ಜಿಹಾದಿಗಳು ಮತ್ತು ಪಾಕಿಸ್ತಾನೀಯರ ಹುಟ್ಟಡಗಿಸಲು ಈಗಿಂದಲೇ ಭದ್ರತಾ ಕಾರ್ಯಾಚರಣೆ ನಡೆಸಬೇಕು ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ತಮಿಳುನಾಡು ಜನತೆಯ ಆಗ್ರಹವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡ ಬಳಿಕವೂ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆದರೆ ಅದು ನಿಜಕ್ಕೂ ಅರ್ಥಹೀನ. ಈ ಹಿನ್ನಲೆಯಲ್ಲಿ ಪೊಲೀಸರು ಕೈಗೊಂಡಿರುವ ಕ್ರಮವನ್ನು ನಾನು ಸ್ವಾಗತಿಸುತ್ತೇನೆಂದು ಹೇಳಿದರು.

Comments are closed.