ರಾಷ್ಟ್ರೀಯ

ಜಲ್ಲಿಕಟ್ಟು: 2016ರ ಅಧಿಸೂಚನೆ ಹಿಂಪಡೆಯಲಾಗಿದೆ: ಸುಪ್ರೀಂಗೆ ಕೇಂದ್ರ

Pinterest LinkedIn Tumblr
16

ನವದೆಹಲಿ: ಜಲ್ಲಿಕಟ್ಟು ಮಸೂದೆಯನ್ನು ತಮಿಳುನಾಡು ಸರ್ಕಾರ ಅಂಗೀಕರಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ 2016ರ ಅಧಿಸೂಚನೆಯನ್ನು ಹಿಂಪಡೆದಿರುವುದಾಗಿ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಜಲ್ಲಿಕಟ್ಟು ನೆಡೆಸಲು ಸಾಧ್ಯವಾಗುವಂತೆ ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ಕಾನೂನು ಮಾಡುವ ಮಸೂದೆಗೆ ತಮಿಳುನಾಡು ವಿಧಾನಸಭೆಯಲ್ಲಿ ಸೋಮವಾರ ವಿಶೇಷ ಅಧಿವೇಶನ ಸರ್ವಾನುಮತದ ಅಂಗೀಕಾರ ನೀಡಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಈ ಕುರಿತು ಅಟಾರ್ನಿ ಜನರಲ್‌ ಮುಖುಲ್‌ ರೋಹಟಗಿ ಅವರು, ಪರಿಸರ ಮತ್ತು ಅರಣ್ಯ ಸಚಿವಾಲಯ 2016ರ ಜ.6ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ನ್ಯಾಯಮೂರ್ತಿ ದೀಪಕ್‌ ಮಿಶ್ರ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದ್ದಾರೆ.

ಜಲ್ಲಿಕಟ್ಟು ಪರವಾಗಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಆದ್ಯತೆ ನೀಡಬೇಕು ಎಂದು 70 ಅರ್ಜಿಗಳು ಸಲ್ಲಿಕೆಯಾಗಿವೆ.

ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿರುವ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ತಿದ್ದುಪಡಿ ಮಸೂದೆಯನ್ನು ಶೀಘ್ರದಲ್ಲಿ ರಾಷ್ಟ್ರಪತಿ ಅವರ ಅಂಕಿತಕ್ಕೆ ಕಳುಹಿಸಲಿದೆ.

Comments are closed.