ಜೈಪುರದ: ಮಹಿಳಾ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ದೆಹಲಿ ಮೂಲದ ಏರ್ ಇಂಡಿಯಾ ವಿಮಾನ ಶನಿವಾರ ಸಂಗನೆರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ರಾಜ್ ಕೋಟ್ -ದೆಹಲಿ ವಿಮಾನ ವೈದ್ಯಕೀಯ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11.30ರ ಸುಮಾರಿಗೆ ಸಂಗನೆರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಪತಿಯೊಂದಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಿಮಾ ಎಂಬ ಮಹಿಳೆ ದಿಢೀರ್ ಹೃದಾಯಾಘತವಾದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂಗನೆರ್ ವಿಮಾನ ನಿಲ್ದಾಣದ ನಿರ್ದೇಶಕ ಆರ್.ಎಸ್. ಬಲ್ಹಾರ ಅವರು ಹೇಳಿದ್ದಾರೆ.
ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Comments are closed.