ರಾಷ್ಟ್ರೀಯ

ಜಾರ್ಖಂಡ್; ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಪೊಲೀಸರು

Pinterest LinkedIn Tumblr


ಲತೆಹಾರ್: ಜಾರ್ಖಂಡ್ ಲತೆಹಾರ್ ಜಿಲ್ಲೆಯಲ್ಲಿದ್ದ ನಕ್ಸಲರ ಅಡಗುತಾಣಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ಖಚಿತ ಮಾಹಿತಿ ಆಧಾರದ ಮೇಲೆ ಲತೇಹಾರ್ ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆಗಿಳಿದ್ದರು. ಈ ವೇಳೆ ನಕ್ಸಲರ ಅಡುತಾಣಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಭಾರೀ ಪ್ರಮಾಣ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆಂದು ಮೂಲಗಳು ತಿಳಿಸಿವೆ.
ಎಸ್ಎಲ್ಆರ್, ಅಮೆರಿಕ ಮೂಲದ ಸೆಮಿ-ಆಟೋಮೆಟಿಕ್ ರೈಫಲ್, 2 ದೇಸೀ ನಿರ್ಮಿತ ರೈಫಲ್ ಗಳು, 81 ಸಜೀವ ಕಾರ್ಟ್ರಿಜ್ಗಳು, ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣ ಸಂಬಂಧ ಪ್ರಸ್ತುತ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ವರೆಗೂ ಯಾರನ್ನೂ ಬಂಧನಕ್ಕೊಳಪಡಿಸಲಾಗಿಲ್ಲ ಎಂದು ತಿಳಿದುಬಂದಿದೆ.

Comments are closed.