ರಾಷ್ಟ್ರೀಯ

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ: ಪ್ರಚಾರಕ್ಕೆ ಹೋಗದ ಸೋನಿಯಾ

Pinterest LinkedIn Tumblr


ನವದೆಹಲಿ: ಮುಂಬರುವ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಯಾವುದೇ ಕ್ಷೇತ್ರದಲ್ಲಿ ಪ್ರಚಾರ ನಡೆಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶದಲ್ಲಿ ಸಮಾಜವಾದಿ (ಎಸ್‌ ಪಿ) ಪಕ್ಷದೊಂದಿಗೆ ಮಾಡಿಕೊಂಡಿರುವ ಚುನಾವಣಾ ಪೂರ್ವ ಮೈತ್ರಿಯಿಂದ ಕೇವಲ ಬಾಹ್ಯ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ನಿರ್ಧರಿಸಿದ್ದಾರೆ ಎಂದು ಅವರ ಆಪ್ತ ವಲಯ ತಿಳಿಸಿದೆ.

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಂದಿಗಿನ ಮೈತ್ರಿ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಸೋನಿಯಾ ಗಾಂಧಿ ಮತ್ತು ಅವರ ಮಗಳಾದ ಪ್ರಿಯಾಂಕ ಗಾಂಧಿ ಮಧ್ಯಸ್ಥಿಕೆಯಿಂದ ಬೃಹತ್‌ ರಾಜ್ಯದ ಎಸ್‌ ಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಸೀಟು ಹಂಚಿಕೆಯಾಗಿದೆ. 403 ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್‌ 105 ಸ್ಥಾನದಲ್ಲಿ ಸ್ಪರ್ಧಿಸಲಿದೆ ಹಾಗೂ ಸಮಾಜವಾದಿ ಪಕ್ಷ 298 ಕ್ಷೇತ್ರದಲ್ಲಿ ಕಣಕ್ಕಿಳಿಯಲಿದೆ.

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್‌ ಮತ್ತು ಮಣಿಪುರದಲ್ಲಿ ವಿಧಾನಸಭೆಗೆ ಚುನಾವಣೆ ಜರುಗಲಿದೆ.

Comments are closed.