ರಾಷ್ಟ್ರೀಯ

ರಾಜಿನಾಮೆ ಹಿಂಪಡೆಯಲು ಬಯಸಿದ್ದೇನೆ: ಪನ್ನೀರ್ ಸೆಲ್ವಂ

Pinterest LinkedIn Tumblr


ಚೆನ್ನೈ: ತಮಿಳುನಾಡು ಹಂಗಾಮಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಅವರು ಗುರುವಾರ ರಾಜ್ಯಪಾಲ ಸಿಎಚ್ ವಿದ್ಯಾಸಾಗರ್ ರಾವ್ ಅವರನ್ನು ಭೇಟಿ ಮಾಡಿದ್ದು, ತಾವು ರಾಜಿನಾಮೆಯನ್ನು ಹಿಂಪಡೆಯಲು ಬಯಸಿರುವುದಾಗಿ ತಿಳಿಸಿದ್ದಾರೆ.
ಇಂದು ಸಂಜೆ 5 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡಿದ ಪನ್ನೀರ್ ಸೆಲ್ವಂ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ನನ್ನ ಮೇಲೆ ಒತ್ತಡ ಹೇರಲಾಗಿತ್ತು. ಹೀಗಾಗಿ ರಾಜಿನಾಮೆ ನೀಡಿದ್ದು, ಈಗ ಅದನ್ನು ಹಿಂಪಡೆಯಲು ಬಯಸಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪನ್ನೀರ್ ಸೆಲ್ವಂ ಅವರು, ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರಿಗೆ ವಿವರಿಸಿದ್ದು, ಧರ್ಮಕ್ಕೆ ಜಯ ಸಿಕ್ಕೆ ಸಿಗುತ್ತೇ ಎಂದು ಹೇಳಿದ್ದಾರೆ. ಅಲ್ಲದೆ ರಾಜ್ಯಪಾಲರು ನನಗೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಶಶಿಕಲಾ ಒತ್ತಾಯಕ್ಕೆ ರಾಜಿನಾಮೆ ಸಲ್ಲಿಸಿದ್ದೇನೆ. ನ್ಯಾಯ, ಧರ್ಮಕ್ಕೆ ಜಯ ಸಿಗುತ್ತೆ. ಸಾಕಷ್ಟು ಜನ ನನ್ನನ್ನು ಬೆಂಬಲಿಸಿದ್ದಾರೆ. ನನ್ನ ಬೆಂಬಲಿಸಿದ ಎಲ್ಲಾ ಶಾಸಕರಿಗೂ ಹಾಗೂ ರಾಜ್ಯದ ಜನತೆಗೆ ಧನ್ಯವಾದಗಳು ಎಂದರು.
ಈ ಮಧ್ಯೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರು ಇಂದು ಸಂಜೆ 7 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದು, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ ಇದೆ.

Comments are closed.