ರಾಷ್ಟ್ರೀಯ

ಮಲ್ಯ ಹಸ್ತಾಂತರಕ್ಕೆ ಭಾರತದಿಂದ್ ಅಧಿಕೃತವಾಗಿ ಬ್ರಿಟನ್ ಗೆ ಮನವಿ

Pinterest LinkedIn Tumblr


ನವದೆಹಲಿ: ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ನಮಗೆ ಹಸ್ತಾಂತರಿಸುವಂತೆ ಭಾರತ ಗುರುವಾರ ಅಧಿಕೃತವಾಗಿ ಬ್ರಿಟನ್ ಗೆ ಮನವಿ ಸಲ್ಲಿಸಿದೆ.
ಭಾರತದಲ್ಲಿ ವಿಚಾರಣೆಗಾಗಿ ವಿಜಯ್ ಮಲ್ಯ ಅವರನ್ನು ಹಸ್ತಾಂತರಿಸುವಂತೆ ಇಂದು ಬ್ರಿಟನ್ ಹೈಕಮಿಷನ್ ಗೆ ಮನವಿ ಮಾಡಿರುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು ತಿಳಿಸಿದ್ದಾರೆ.
9 ಸಾವಿರ ಕೋಟಿ ರುಪಾಯಿ ಸಾಲ ಮಾಡಿಕೊಂಡು ದೇಶದಿಂದ ಪಲಾಯನ ಮಾಡಿರುವ ಉದ್ಯಮಿ ವಿಜಯ್ ಮಲ್ಯ ಅವರ ವಿರುದ್ಧ ಈಗಾಗಲೇ ರೆಡ್ ಕಾರ್ನರ್ ನೋಟಿಸ್ ಹಾಗೂ ಕೋರ್ಟ್ ಗಳಿಂದ ಹಲವು ಜಾಮೀನು ರಹಿತ ವಾರಂಟ್ ಜಾರಿ ಮಾಡಿದ್ದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಆದರೆ ಇದೀಗ ಮಲ್ಯನ್ನು ದೇಶಕ್ಕೆ ಕರೆತರುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

Comments are closed.