ರಾಷ್ಟ್ರೀಯ

ದೇಶದ ಜನತೆಗೆ ದೀಪಾವಳಿಯ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ ಮೋದಿ

Pinterest LinkedIn Tumblr

ನವದೆಹಲಿ: ದೇಶದಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಸ್ತ ಜನತೆಗೆ ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ.

ದೀಪಾವಳಿ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಶುಭಾಶಯ ಕೋರಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಸ್ತ ಜನತೆಗೆ ದೀಪಾವಳಿಯ ಶುಭಾಶಯಗಳು ಎಂದು ಹೇಳಿದ್ದಾರೆ.

ಇದರಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೂ ಕೂಡ ಟ್ವಿಟರ್ ನಲ್ಲಿ ಶುಭಾಶಯಗಳನ್ನು ಕೋರಿದ್ದು, ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ದೀಪಾವಳಿಯನ್ನು ನಮ್ಮ ಕುಟುಂಬಸ್ಥರೊಂದಿಗೆ ಆಚರಿಸುತ್ತೇವೆ. ಇತರರಲ್ಲಿ ಪರಿಸರದ ಕುರಿತ ಸೂಕ್ಷ್ಮತೆಯನ್ನು ಉತ್ತೇಜಿಸೋಣ ಎಂದು ತಿಳಿಸಿದ್ದಾರೆ.

Comments are closed.