ರಾಷ್ಟ್ರೀಯ

ನವೆಂಬರ್ ಮೊದಲ ವಾರದಲ್ಲಿ ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ!

Pinterest LinkedIn Tumblr


ನವದೆಹಲಿ: ನಿರೀಕ್ಷೆಯಂತೆಯೇ ಎಐಎಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಪಕ್ಷದ ಅಧಿಪತ್ಯ ವಹಿಸಲು ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇದೇ ನವೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದೈನಿಕವೊಂದು ವರದಿ ಮಾಡಿರುವಂತೆ ಈಗಾಗಲೇ ಕಾಂಗ್ರೆಸ್ ಪಕ್ಷದ ಕ್ರಿಯಾ ಸಮಿತಿ ಪಕ್ಷದ ಅಧ್ಯಕ್ಷಗಾದಿಗೆ ಚುನಾವಣೆ ಘೋಷಣೆ ಮಾಡಿದ್ದು, ಇದೇ ಅಕ್ಟೋಬರ್ 24ರಂದು ಚುನಾವಣೆ ನಡೆಯಲಿರುವ ಸಾಧ್ಯತೆ ಇದೆ. ಪತ್ರಿಕೆ ವರದಿ ಮಾಡಿರುವಂತೆ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷಗಾದಿಗೆ ಗೇರಿಸಲು ಎಂದೇ ಈ ಚುನಾವಣೆ ನಡೆಸಲಾಗುತ್ತಿದೆ ಎಂದು ವರದಿ ಮಾಡಲಾಗಿದೆ.
ರಾಹುಲ್ ಗಾಂಧಿ ಅವರನ್ನು ಈ ಹಿಂದೆಯೇ ಪಕ್ಷದ ಅಧ್ಯಕ್ಷ ಹುದ್ದೆಗೇರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತಾದರೂ, ಪಕ್ಷದ ಕೆಲ ಕಾರ್ಯಕರ್ತ ರಾಹುಲ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಪ್ರಿಯಾಂಕಾ ಗಾಂಧಿ ಅವರನ್ನು ಅಧ್ಯಕ್ಷರಾಗಿ ಮಾಡಬೇಕು ಎಂದು ಆಗ್ರಹಿಸಿದ್ದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಈ ಹಿಂದಿನ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲುಕಂಡಿತ್ತು. ಇದು ರಾಹುಲ್ ರನ್ನು ಅಧ್ಯಕ್ಷರಾಗುಪುದಕ್ಕೆ ತಡೆಯಾಗಿತ್ತು. ಆದರೆ ಇದೀಗ ರಾಹುಲ್ ರನ್ನು ಅಧ್ಯಕ್ಷಗಾದಿಗೇರಿಸಲು ಸೂಕ್ತ ಸಮಯ ಎಂದು ನಿರ್ಧರಿಸಿರುವ ಕಾಂಗ್ರೆಸ್ ಪಕ್ಷ ಇದೇ ನವೆಂಬರ್ ಮೊದಲ ವಾರದಲ್ಲಿ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡುವ ಸಾಧ್ಯತೆ ಇದೆ.

Comments are closed.