ರಾಷ್ಟ್ರೀಯ

ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್: ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Pinterest LinkedIn Tumblr


ನವದೆಹಲಿ: ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿ ದೂರಸಂಪರ್ಕ ಇಲಾಖೆ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

ನ್ಯಾಯಮೂರ್ತಿ ಜೆ ಚೆಲಮೇಶ್ವರ್ ಮತ್ತು ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರನ್ನೊಳಗೊಂಡ ಪೀಠ, ನಾಳೆ ವಿಚಾರಣೆ ನಡೆಸುವ ಅರ್ಜಿಗಳ ಪಟ್ಟಿಗೆ ಸೇರಿಸಲು ನಿರಾಕರಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ, ಆಧಾರ್ ಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದು, ಅಕ್ಟೋಬರ್ 30ರಂದು ಆ ಪೀಠಕ್ಕೆ ಮನವಿ ಸಲ್ಲಿಸುವಂತೆ ತುರ್ತು ವಿಚಾರಣೆ ಕೋರಿದ್ದ ಅರ್ಜಿದಾರರಿಗೆ ಕೋರ್ಟ್ ಸೂಚಿಸಿದೆ.

ಮೊಬೈಲ್ ನಂಬರ್ ಗೆ ಆಧಾರ್ ಕಡ್ಡಾಯಗೊಳಿಸಿ ಕಳೆದ ಮಾರ್ಚ್ 23ರಂದು ದೂರ ಸಂಪರ್ಕ ಇಲಾಖೆ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಿ ತೆಹಸೀನ್ ಪೂನವಾಲಾ ಅವರು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ. ಅಲ್ಲದೆ ತಮ್ಮ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಕೇಳಿಕೊಂಡಿದ್ದರು.

Comments are closed.