
ಲಖನೌ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಕ್ಷೇಪಾರ್ಹ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಮಹಾರಾಜ್‌ಗಂಜ್ ಜಿಲ್ಲೆಯ 7 ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
‘ಹಿಂದೂ ಯುವ ವಾಹಿನಿ ಸಂಘಟನೆಯ ಮುಖ್ಯಸ್ಥ ನರಸಿಂಗ್ ಪಾಂಡೆ ಅವರು ಸಲ್ಲಿಸಿದ ದೂರಿನನ್ವಯ ಆರೋಪಿಗಳನ್ನು ಬಂಧಿಸಲಾಗಿದೆ,’ ಎಂದು ಪೊಲೀಸರು ತಿಳಿಸಿದ್ದಾರೆ.
2002ರಲ್ಲಿ ಯೋಗಿ ಆದಿತ್ಯನಾಥ್ ಅವರು ಹಿಂದೂ ಯುವ ವಾಹಿನಿ ಸಂಘಟನೆಯನ್ನು ಸ್ಥಾಪಿಸಿದ್ದರು.
‘ದುಷ್ಕರ್ಮಿಗಳು ಯೋಗಿ ಅವರ ಫೋಟೋಗಳನ್ನು ಫೋಟೋ ಶಾಪ್ ಮಾಡಿ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ. ಇದರಿಂದ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗುತ್ತಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಬೇ,ಕು’ ಎಂದು ಪಾಂಡೆ ಅವರು ದೂರಿನಲ್ಲಿ ಆರೋಪಿಸಿದ್ದರು.
Comments are closed.