
ಹೊಸದಿಲ್ಲಿ: ಆಧಾರ್ ಅನ್ನು ಎಲ್ಲದಕ್ಕೂ ಕಡ್ಡಾಯಗೊಳಿಸುವುದರಿಂದ ರಾಷ್ಟ್ರೀಯ ಭದ್ರತೆಗೆ ಅಪಾಯವಿದೆ ಎಂದು ಬಿಜೆಪಿ ನಾಐ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಈ ಕುರಿತು ತಮ್ಮ ಕಳವಳವನ್ನು ವಿವರಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿಯೂ ತಿಳಿಸಿದ್ದಾರೆ.
‘ಆಧಾರ್ ಕಡ್ಡಾಯಗೊಳಿಸುವುದರಿಂದ ದೇಶದ ಭದ್ರತೆಗೆ ಯಾವ ರೀತಿ ಅಪಾಯವಿದೆ ಎಂಬುದನ್ನು ವಿವರಿಸಿ ಶೀಘ್ರವೇ ಪ್ರಧಾನಿಗೆ ಪತ್ರ ಬರೆಯುವೆ. ಸುಪ್ರೀಂ ಕೋರ್ಟ್ ಅದನ್ನು ರದ್ದುಪಡಿಸಲಿದೆ’ ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಮೊಬೈಲ್ ಫೋನ್‌ಗಳಿಗೆ ಆಧಾರ್ ಲಿಂಕ್ ಮಾಡುವದನ್ನು ಪ್ರಶ್ನಿಸಿದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟೀಸ್ ಜಾರಿ ಮಾಡಿದೆ. ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಆಧಾರ್ ಕಡ್ಡಾಯಗೊಳಿಸುವುದನ್ನು ಪ್ರಶ್ನಿಸಿದ ಎಲ್ಲ ಅರ್ಜಿಗಳನ್ನು ಸಂವಿಧಾನ ಪೀಠ ಒಟ್ಟಿಗೆ ವಿಚಾರಣೆ ನಡೆಲಿಸದೆ.
ಈ ಹಿಂದೆಯೂ ಸ್ವಾಮಿ ಆಧಾರ್ ವಿರುದ್ಧ ಮಾತನಾಡಿದ್ದರು. ಆಧಾರ್ ವಿವರಗಳು ವಿದೇಶಿ ಗುಪ್ತಚರ ಸಂಸ್ಥೆಗಳ ಪಾಲಾಗುವ ಅಪಾಯವಿದೆ ಎಂದು ಪ್ರತಿಪಾದಿಸಿದ್ದರು.
Comments are closed.