ರಾಷ್ಟ್ರೀಯ

ಉತ್ತರಪ್ರದೇಶದ ಸರ್ಕಾರಿ ಸ್ವಾಮ್ಯದ ವಸತಿ ಶಾಲೆಯೊಂದರಲ್ಲಿ ವಿಷಯುಕ್ತ ಬಿಸ್ಕೆಟ್ ತಿಂದು 100ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ

Pinterest LinkedIn Tumblr

ಭದೋಹಿ: ಸರ್ಕಾರಿ ಸ್ವಾಮ್ಯದ ವಸತಿ ಶಾಲೆಯೊಂದರಲ್ಲಿ ನೀಡಲಾಗಿರುವ ವಿಷಯುಕ್ತ ಬಿಸ್ಕೆಟ್ ತಿಂದು 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಭದೋಹಿ ಜಿಲ್ಲೆಯ ರಯಾ ಪ್ರದೇಶದಲ್ಲಿ ಬುಧವಾರ ನಡೆದಿದೆ.

ರಯಾ ಪ್ರದೇಶದಲ್ಲಿರುವ ದೀನ್’ದಯಾಳ್ ವಸತಿ ಶಾಲೆಯಲ್ಲಿ ನಿನ್ನೆ ಸಂಜೆ ಮಕ್ಕಳಿಗೆ ಬಿಸ್ಕೆಟ್ ನೀಡಲಾಗಿದೆ. ಬಿಸ್ಕೆಟ್ ತಿಂದ ಕೆಲವೇ ನಿಮಿಷಗಳಲ್ಲಿ ಮಕ್ಕಳಿಗೆ ಹೊಟ್ಟೆನೋವು ಹಾಗೂ ವಾಂತಿ ಶುರುವಾಗಿದೆ. ಕೂಡಲೇ ಶಾಲಾ ಸಿಬ್ಬಂದಿಗಳು ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ವೈದ್ಯಕೀಯ ಅಧಿಕಾರಿ ಸತೀಶ್ ಸಿಂಗ್ ಆವರು ಮಾತನಾಡಿ, ಆಸ್ಪತ್ರೆಗೆ ದಾಖಲಾಗಿರುವ ಎಲ್ಲಾ ಮಕ್ಕಳೂ 10-14 ವರ್ಷದೊಳಗಿನ ಮಕ್ಕಳಾಗಿದ್ದಾರೆ. 100 ಮಕ್ಕಳ ಪೈಕಿ 45 ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ಇನ್ನುಳಿದ 55 ಮಕ್ಕಳನ್ನು ಪರೀಕ್ಷಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿ ವಿಶಾಕ್ ಜಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಶಾಲೆಯನ್ನು ನಡೆಸುತ್ತಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Comments are closed.