ರಾಷ್ಟ್ರೀಯ

‘ನಾವು ಅಧಿಕಾರಕ್ಕೆ ಬಂದ ತಕ್ಷಣ ಜಿಎಸ್ ಟಿ ಬದಲಾಯಿಸ್ತೇವೆ’

Pinterest LinkedIn Tumblr


ನವದೆಹಲಿ: ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಎಸ್ ಟಿ ಎಂದರೆ ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದಿದ್ದ ರಾಹುಲ್, ಇದೀಗ 2019 ರಲ್ಲಿ ನಾವು ಅಧಿಕಾರಕ್ಕೆ ಬಂದ ತಕ್ಷಣ ಜಿಎಸ್ ಟಿ ಸ್ವರೂಪವನ್ನೇ ಬದಲಾಯಿಸುತ್ತೇವೆ ಎಂದಿದ್ದಾರೆ.

ಪ್ರಧಾನಿ ಮೋದಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಭ್ರಷ್ಟಾಚಾರದ ಮರ ಎಂದು ವಾಗ್ದಾಳಿ ನಡೆಸಿರುವುದಕ್ಕೆ ತಿರುಗೇಟು ನೀಡಿರುವ ರಾಹುಲ್ ‘2019 ರಲ್ಲಿ ನಾವು ಅಧಿಕಾರಕ್ಕೆ ಬಂದ ತಕ್ಷಣ ಜಿಎಸ್ ಟಿಯ ಸ್ವರೂಪವನ್ನೇ ಬದಲಾಯಿಸುತ್ತೇವೆ. ಆ ಮೂಲಕ ಅದರಿಂದ ಜನರು ಈಗ ಅನುಭವಿಸುತ್ತಿರುವ ಬವಣೆಗೆ ಬದಲಾವಣೆ ತರುತ್ತೇವೆ’ ಎಂದು ರಾಹುಲ್ ಹೇಳಿದ್ದಾರೆ.

ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿರುವುದಕ್ಕೂ ಮೋದಿ ಸರ್ಕಾರವೇ ಕಾರಣ ಎಂದು ಟೀಕಿಸಿರುವ ರಾಹುಲ್, ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದ ಪ್ರಧಾನಿ ಮೋದಿ ಭರವಸೆ ಈಗೆಲ್ಲಿ ಹೋಯ್ತು ಎಂದು ಲೇವಡಿ ಮಾಡಿದ್ದಾರೆ.

Comments are closed.