ರಾಷ್ಟ್ರೀಯ

ಆಸಿಯಾನ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಫಿಲಿಫೈನ್ಸ್ ಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ

Pinterest LinkedIn Tumblr

ನವದೆಹಲಿ: ಭಾರತ-ಆಸಿಯಾನ್ ಶೃಂಗಸಭೆ ಸೇರಿದಂತೆ ಹಲವು ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಫಿಲಿಫೈನ್ಸ್ ಗೆ ತೆರಳಿದ್ದಾರೆ.

ಭಾರತ-ಆಸಿಯಾನ್ ಶೃಂಗಸಭೆಯಲ್ಲಿ ಭಾಗವಹಿಸಲು ತಾವು ಫಿಲಿಫೈನ್ಸ್ ಗೆ ಭೇಟಿ ನೀಡುತ್ತಿರುವುದು ಆಸಿಯಾನ್ ರಾಷ್ಟ್ರಗಳೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಬದ್ಧತೆಯನ್ನು ತೋರಿಸುತ್ತಿದೆ ಎಂದು ಫಿಲಿಫೈನ್ಸ್ ಗೆ ತೆರಳುವ ಮುನ್ನ ಪ್ರಧಾನಿ ಹೇಳಿಕೆಯಲ್ಲಿ ನಿನ್ನೆ ತಿಳಿಸಿದ್ದಾರೆ.

ತಮ್ಮ ಮೂರು ದಿನಗಳ ಭೇಟಿಯಲ್ಲಿ ಪ್ರಧಾನಿ, ಆಸಿಯಾನ್-ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸುವುದರ ಹೊರತಾಗಿ ಆಸಿಯಾನ್ ಶೃಂಗಸಭೆಯ 50ನೇ ವಾರ್ಷಿಕೋತ್ಸವದಲ್ಲಿ, ಸ್ಥಳೀಯ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್ ಸಿಇಪಿ) ನಾಯಕರ ಸಭೆಯಲ್ಲಿ ಮತ್ತು ಆಸಿಯಾನ್ ಆರ್ಥಿಕ ಮತ್ತು ಹೂಡಿಕೆ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿಯವರು ತಮ್ಮ ಭೇಟಿ ಸಂದರ್ಭದಲ್ಲಿ ಫಿಲಿಫೈನ್ಸ್ ಅಧ್ಯಕ್ಷ ರೊಡ್ರಿಗೊ ಡುಟೆರ್ಟೆ ಅವರನ್ನು ಭೇಟಿ ಮಾಡಲಿದ್ದಾರೆ. ಆಸಿಯಾನ್ ಮತ್ತು ಪೂರ್ವ ಏಷ್ಯಾ ಶೃಂಗಸಭೆ ನಾಯಕರೊಂದಿಗೆ ಕೂಡ ಸಂವಾದ ನಡೆಸಲಿದ್ದಾರೆ. ಫಿಲಿಫೈಲ್ಸ್ ನಲ್ಲಿರುವ ಭಾರತೀಯ ಸಮುದಾಯವನ್ನು ಪ್ರಧಾನಿಯವರು ಭೇಟಿ ಮಾಡುವ ನಿರೀಕ್ಷೆಯಿದೆ.

Comments are closed.