ರಾಷ್ಟ್ರೀಯ

ನ್ಯಾಯಾಲಯ ಆವರಣದಲ್ಲಿ ಗುಂಡಿನ ದಾಳಿ; ವಿಚಾರಣಾಧೀನ ಕೈದಿಯ ಹತ್ಯೆ

Pinterest LinkedIn Tumblr

`

ನವದೆಹಲಿ: ಇಲ್ಲಿನ ರೋಹಿಣಿ ನ್ಯಾಯಾಲಯದ ಕಟ್ಡಡದ ಆವರಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ವಿಚಾರಣಾಧೀನ ಕೈದಿಯನ್ನು ಪೊಲೀಸರು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಮೃತ ವಿಚಾರಣಾಧೀನ ಕೈದಿಯನ್ನು ವಿನೋದ್ ಅಲಿಯಾಸ್ ಬಲ್ಲೆ ಎಂದು ಗುರುತಿಸಲಾಗಿದೆ. ಈತನನ್ನು ಸೇನಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು ಎಂದು ಡಿಸಿಪಿ ರಿಶಿ ಪಾಲ್ ಹೇಳಿದ್ದಾರೆ.

ನ್ಯಾಯಾಲಯಕ್ಕೆ ಹಾಜರುಪಡಿಸಿ ವಾಪಸ್ಸು ಕರೆದುಕೊಂಡು ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ಶಸ್ತ್ರಾಸ್ತ್ರವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ವಿಚಾರಣಾಧೀನ ಕೈದಿಯು ಆಸ್ಪತ್ರೆಗೆ ಸಾಗಿಸುವ ಮಧ್ಯೆಯೇ ಮೃತಪಟ್ಟಿದ್ದಾನೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.