ರಾಷ್ಟ್ರೀಯ

ರಾಹುಲ್‌ ಗಾಂಧಿಗೆ ಕಾಂಗ್ರೆಸ್‌ ಅಧ್ಯಕ್ಷ ಪಟ್ಟ: ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ

Pinterest LinkedIn Tumblr

ನವದೆಹಲಿ: ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವ ನಿರ್ಣಯವನ್ನು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಸೋಮವಾರ ತೆಗೆದುಕೊಳ್ಳಲಾಗಿದೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ 10 ಜನಪತ್‌ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸ್ಥಾನಕ್ಕೆ ರಾಹುಲ್‌ ಗಾಂಧಿ ಏಕೈಕ ಅಭ್ಯರ್ಥಿ ಎನ್ನಲಾಗಿದೆ.

ಡಿಸೆಂಬರ್‌ನಲ್ಲಿ ನಡೆಯಲಿರುವ ಗುಜರಾತ್‌ ಚುನಾವಣೆಗೂ ಮುಂಚಿತವಾಗಿ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.
‍‍ಪಕ್ಷದ ಅಧ್ಯಕ್ಷ ಸ್ಥಾನದ ಚುನವಾಣೆಗೆ ಡಿ.1ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಡಿ.4ಕ್ಕೆ ನಾಮನಿರ್ದೇಶನ, ಡಿ.16ಕ್ಕೆ ಮತದಾನ ಹಾಗೂ ಡಿ.19ಕ್ಕೆ ಮತಎಣಿಕೆ ನಿಗದಿಯಾಗಿದೆ.

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆಯಾಗಿ ಏಳು ವರ್ಷಗಳ ನಂತರ 1998ರಲ್ಲಿ ಸೋನಿಯಾ ಗಾಂಧಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದರು. ಅವರು 19 ವರ್ಷಗಳ ಸುದೀರ್ಘ ಅವಧಿ ಪಕ್ಷದ ಅಧ್ಯಕ್ಷ ಸ್ಥಾನ ನಿರ್ವಹಿಸಿದ್ದಾರೆ.

2004ರಲ್ಲಿ ರಾಜಕೀಯ ಪ್ರವೇಶ ಮಾಡಿದ ರಾಹುಲ್‌ ಗಾಂಧಿ 2013ರಲ್ಲಿ ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

Comments are closed.