ರಾಷ್ಟ್ರೀಯ

ತಮಿಳುನಾಡಿನ ಕರಾವಳಿ ತೀರಕ್ಕೆ ಅಪ್ಪಳಿಸಿದ ‘ಓಖಿ ಚಂಡಮಾರುತ’; 4 ಬಲಿ

Pinterest LinkedIn Tumblr


ಕನ್ಯಾಕುಮಾರಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ‘ಓಖಿ ಚಂಡಮಾರುತ’ದಿಂದ ಚೆನ್ನೈ ಸಂಪೂರ್ಣವಾಗಿ ತತ್ತರಿಸಿದ್ದು, ಕನ್ಯಾಕುಮಾರಿ ಜಿಲ್ಲೆಯಲ್ಲಿ ನಾಲ್ವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಪ್ರಮುಖವಾಗಿ ತಮಿಳುನಾಡಿನ ಕರಾವಳಿ ತೀರದಲ್ಲಿ ಭಾರಿ ಮಳೆಯಾಗುತ್ತಿದ್ದು, ಗಂಟೆಗೆ ಸುಮಾರು 150 ಕಿ.ಮೀ ವೇಗದಲ್ಲಿ ಓಖಿ ಚಂಡಮಾರುತ ಲಕ್ಷದ್ವೀಪದತ್ತ ಧಾವಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕನ್ಯಾಕುಮಾರಿ ಎಸ್‌ಪಿ ನೀಡಿದ ಮಾಹಿತಿಗಳ ಪ್ರಕಾರ ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಭಾರೀ ಗಾಳಿಯಿಂದ ಮರಗಳು ಕುಸಿದು ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಮೃತ ವ್ಯಕ್ತಿಗಳನ್ನು ಕಾರ್ತಿಗೈವದಲ್ಲಿ ನಿವಾಸಿ ಎಮ್‌ ರವೀಂದ್ರನ್‌, ಕಮರೇಸನ್‌, ಮನಲಿವಿಲೈಲಿನ ಸರಸ್ವತಿ, ಪರಕ್ಕುಂಡ್ರುವಿನ ಅಲೆಕ್ಸಾಂಡರ್‌ ಎಂದು ಗುರುತಿಸಲಾಗಿದೆ.

ತಮಿಳುನಾಡಿನ ಟುಟಿಕಾರನ್, ತಿರುನೆಲ್ವೇಲಿ, ಕನ್ಯಾಕುಮಾರಿ, ವಿರುದುನಗರ್ ಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆ ಪೀಡಿತ ಈ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Comments are closed.