
ನವದೆಹಲಿ: ದೇಶದಲ್ಲಿ ಮತ್ತೆ ಚುನಾವಣೆ ಬರುತ್ತಿರುವ ಹಿನ್ನಲೆಯಲ್ಲಿ ಅಲ್ಪಸಂಖ್ಯಾತರು, ಹಿಂದುಳಿದವರ ಓಲೈಕೆಗೆ ಮುಂದಾಗಿರುವ ಕೇಂದ್ರ ಸರ್ಕಾರ ವಿವಾದಿತ ಗೋ ಹತ್ಯೆ ನಿಷೇಧ ಕಾಯಿದೆಯನ್ನು ಹಿಂಪಡೆಯಲು ಚಿಂತನೆ ನಡೆಸಿದೆ ಎನ್ನಲಾಗಿದೆ.
ಗೋ ಹತ್ಯೆ ನಿಷೇಧ ಕಾಯಿದೆ ಜಾರಿಗೆ ತಂದಾಗ ಆಹಾರ ನಮ್ಮ ಹಕ್ಕು ಎಂದು ಬಿಜೆಪಿಯೇತರ ರಾಜ್ಯಗಳು, ವಿಪಕ್ಷಗಳು ಕೇಂದ್ರದ ವಿರುದ್ಧ ಹರಿ ಹಾಯ್ದಿದ್ದವು. ಈ ಕಾಯಿದೆ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು.
ಆದರೆ ಇದೀಗ ಸ್ವತಃ ಕೇಂದ್ರ ಕಾಯಿದೆ ಹಿಂಪಡೆಯಲು ಮುಂದಾಗಿದೆಯಾ ಎಂಬ ಅನುಮಾನ ಹುಟ್ಟಿದೆ. ಕಸಾಯಿ ಖಾನೆಗಳಲ್ಲಿ ಗೋ ಹತ್ಯೆ ನಿಷೇಧ ಹಿಂಪಡೆಯಲು ಕೇಂದ್ರ ಚಿಂತನೆ ನಡೆಸಿದೆ ಎನ್ನಲಾಗಿದೆ.
Comments are closed.